ಜಾಗತಿಕ ಹಸಿವು ಸೂಚ್ಯಂಕ 2021: 101ನೇ ಸ್ಥಾನದಲ್ಲಿ ಭಾರತ
ಜಾಗತಿಕ ಹಸಿವು ಸೂಚ್ಯಂಕ 2021ರಲ್ಲಿ 116 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94 ರಿಂದ 101ನೇ ಸ್ಥಾನಕ್ಕೆ ಇಳಿದಿದ್ದು, ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಗಿಂತ ಕೆಳಸ್ಥಾನದಲ್ಲಿದೆ.
Published: 14th October 2021 08:46 PM | Last Updated: 14th October 2021 08:48 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಜಾಗತಿಕ ಹಸಿವು ಸೂಚ್ಯಂಕ 2021ರಲ್ಲಿ 116 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94 ರಿಂದ 101ನೇ ಸ್ಥಾನಕ್ಕೆ ಇಳಿದಿದ್ದು, ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಗಿಂತ ಕೆಳಸ್ಥಾನದಲ್ಲಿದೆ.
ಚೀನಾ, ಭ್ರಜಿಲ್ ಮತ್ತು ಕುವೈತ್ ಸೇರಿದಂತೆ 18 ರಾಷ್ಟ್ರಗಳು ಐದಕ್ಕಿಂತ ಕಡಿಮೆ ಅಂಕಗಳೊಂದಿಗೆ ಅಗ್ರ ಸ್ಥಾನವನ್ನು ಹಂಚಿಕೊಂಡಿವೆ ಎಂದು ಗ್ಲೋಬಲ್ ಹಂಗರ್ ಇಂಡೆಕ್ಸ್ ( ಜಿಹೆಚ್ ಐ) ವೆಬ್ ಸೈಟ್ ಗುರುವಾರ ಹೇಳಿದೆ.
ಇದನ್ನೂ ಓದಿ: ಜಾಗತಿಕ ಹಸಿವು ಸೂಚ್ಯಂಕ: ನೇಪಾಳ, ಬಾಂಗ್ಲಾ, ಪಾಕಿಸ್ತಾನಕ್ಕಿಂತಲೂ ಕೆಳಸ್ಥಾನದಲ್ಲಿ ಭಾರತ
ಐರಿಶ್ ನೆರವಿನ ಸಂಸ್ಥೆ ಕನ್ಸರ್ನ್ ವರ್ಲ್ಡ್ ವೈಡ್ ಮತ್ತು ಜರ್ಮನಿಯ ವೆಲ್ಟ್ ಹಂಗರ್ ಹಿಲ್ಫೆ ಸಂಸ್ಥೆ ಜಂಟಿಯಾಗಿ ತಯಾರಿಸಿದ ವರದಿಯಂತೆ ಭಾರತದಲ್ಲಿ ಹಸಿವಿನ ಮಟ್ಟ 'ಆತಂಕಕಾರಿ' ಎಂದು ಬಣ್ಣಿಸಲಾಗಿದೆ.
ಕಳೆದ ವರ್ಷ 107 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94 ನೇ ಸ್ಥಾನದಲ್ಲಿತ್ತು. ಇದೀಗ 116 ರಾಷ್ಟ್ರಗಳ ಪೈಕಿಯಲ್ಲಿ 101ನೇ ಸ್ಥಾನಕ್ಕೆ ಕುಸಿದಿದೆ. ಭಾರತದ ಜಾಗತಿಕ ಹಸಿವು ಸೂಚ್ಯಂಕ ಸ್ಕೋರ್ 2012 ಮತ್ತು 2021 ರ ನಡುವೆ ಶೇ 28.5 ರಿಂದ ಶೇ. 27. 5ಕ್ಕೆ ಕುಸಿದಿದೆ.
ಪಾಕಿಸ್ತಾನ ಈ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕಿಂತ ಮೇಲಿನ ಸ್ಥಾನದಲ್ಲಿದೆ. ಪಾಕಿಸ್ತಾನ 92ನೇ ಸ್ಥಾನದಲಿದ್ದರೆ, ನೇಪಾಳ (76) ಬಾಂಗ್ಲಾದೇಶ (76) ಮತ್ತು ಮಾನ್ಮಾರ್ 71ನೇ ಸ್ಥಾನದಲ್ಲಿದೆ. ಆದರೆ, ಈ ರಾಷ್ಟ್ರಗಳಲ್ಲಿ ಭಾರತಕ್ಕಿಂತ ಕಡಿಮೆ ಪ್ರಮಾಣದ ಹಸಿವಿನ ಸಮಸ್ಯೆಯಿದೆ.