ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ: ಏಮ್ಸ್ ವೈದ್ಯರು

ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 
ಮನಮೋಹನ್ ಸಿಂಗ್
ಮನಮೋಹನ್ ಸಿಂಗ್

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 

ಅತೀವ್ರ ಜ್ವರದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರನ್ನು ಬುಧವಾರ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮನಮೋಹನ್ ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಆರೋಗ್ಯ ಸುಧಾರಿಸುತ್ತಿರುವಾಗಲೇ ನಿನ್ನೆ ಶಕ್ತಿಹೀನತೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಏಮ್ಸ್'ನ ಹೃದ್ರೋಗ ಘಟಕಕ್ಕೆ ದಾಖಲಿಸಲಾಗಿತ್ತು. 

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಣವ್ ಝಾ ಅವರು, ಡಾ.ಸಿಂಗ್ ಅವರು ಸಾಮಾನ್ಯ ಆರೋಗ್ಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರ ಆರೋಗ್ಯ ಸ್ಥಿರವಾಗಿದ್ದು, ಆತಂಕಪಡಬೇಕಿಲ್ಲ. ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ವದಂತಿಗಳು ಸುಳ್ಳು ಎಂದು ಸ್ಪಷ್ಟಪಡಿಲಸಿದ್ದರು. 

ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್, ಮಾಜಿ ಸಿಎಂ ಅಮರೀಂದರ್ ಸಿಂಗ್, ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಸೇರಿ ಅನ್ಯ ಪಕ್ಷಗಳ ನಾಯಕರು ಸಿಂಗ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಆಶಿಸಿದ್ದಾರೆ. 

ಈ ನಡವೆ ಏಮ್ಸ್'ಗೆ ಭೇಟಿ ನೀಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆಂದು ತಿಳಿದುಬಂದಿದೆ. 

ಶೀಘ್ರಗತಿ ಗುಣಮುಖರಾಗುವಂತೆ ಮನಮೋಹನ್ ಸಿಂಗ್'ರಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ
ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಹಾರೈಸಿದ್ದಾರೆ. 

ಡಾ.ಮನಮೋಹನ್ ಸಿಂಗ್ ಜೀ ಅವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ. ಉತ್ತಮ ಆರೋಗ್ಯ ಹೊಂದಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com