ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 400 ಸೀಟು ಗೆಲ್ಲಬಹುದು: ಅಖಿಲೇಶ್ ಯಾದವ್

2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 400 ಸೀಟುಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್

ಲಕ್ನೋ: 2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 400 ಸೀಟುಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಜನಾಕ್ರೋಶ ನೋಡಿದರೆ, ಮುಂಬರುವ 2022 ರ ಚುನಾವಣೆಯಲ್ಲಿ ಉತ್ತರ ಪ್ರದೇಶದ ಜನರು ನಮ್ಮ ಪಕ್ಷವನ್ನು 400 ಸ್ಥಾನಗಳನ್ನು ಗೆಲ್ಲುವಂತೆ ಮಾಡಬಹುದು ಎಂದು ತೋರುತ್ತದೆ" ಎಂದು ಅಖಿಲೇಶ್ ತಿಳಿಸಿದ್ದಾರೆ.

ಕಾನ್ಪುರದ ದೇಹತ್ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸರ್ಕಾರವನ್ನು ರಾಜ್ಯದಿಂದ ತೆಗೆದುಹಾಕುವುದು ಸಮಾಜವಾದಿ ಪಕ್ಷದ ಗುರಿ ಎಂದು ಹೇಳಿದರು.

ಸಮಾಜವಾದಿ ಪಕ್ಷ ಸರ್ಕಾರದ ಆಡಳಿತದಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣವನ್ನು ಅಕ್ಟೋಬರ್ 20 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದು, ಬಿಜೆಪಿ ಸರ್ಕಾರ ಕ್ರೆಡಿಟ್ ಪಡೆದುಕೊಳ್ಳಲು ಯತ್ನಿಸುತ್ತಿದೆ ಎಂದು ಅಖಿಲೇಶ್ ಯಾದವ್ ಆರೋಪಿಸಿದರು.

ಉದ್ಘಾಟನೆಗೊಳ್ಳುತ್ತಿರುವ ವಿಮಾನ ನಿಲ್ದಾಣವನ್ನು ಸಮಾಜವಾದಿ ಪಕ್ಷ ನಿರ್ಮಿಸಿದೆ. ಬಣ್ಣಗಳನ್ನು ಬದಲಾಯಿಸುವುದು, ಒಬ್ಬರ ಹೆಸರನ್ನು ಇನ್ನೊಬ್ಬರ ಕೆಲಸಕ್ಕೆ ಹಾಕುವುದು ಬಿಜೆಪಿ ಸಂಸ್ಕೃತಿಯಾಗಿದ್ದು,  ಬಿಜೆಪಿ ರಾಜಕೀಯದಲ್ಲಿ ಹೊಸ ಪದ್ಧತಿ ಆರಂಭಿಸಿದೆ ಎಂದು ಅಖಿಲೇಶ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com