ಉತ್ತರ ಪ್ರದೇಶದ ನಕಲಿ ಬಾಬ ಶೀಘ್ರವೇ ಹುದ್ದೆಯಿಂದ ಹೊರಕ್ಕೆ: ಅಖಿಲೇಶ್ ಯಾದವ್

ಲಖಿಂಪುರ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಅಖಿಲೇಶ್ ಯಾದವ್, ಬಿಜೆಪಿ ಸರ್ಕಾರ ರೈತ ವಿರೋಧಿ ಎಂದು ಆರೋಪಿಸಿದ್ದು, ಶೀಘ್ರವೇ ಸರ್ಕಾರವನ್ನು ಜನತೆ ಬದಲಾಯಿಸಲಿದ್ದಾರೆ ಎಂದು ಹೇಳಿದ್ದಾರೆ.
ಅಖಿಲೇಶ್ ಯಾದವ್-ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
ಅಖಿಲೇಶ್ ಯಾದವ್-ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಲಖಿಂಪುರ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಅಖಿಲೇಶ್ ಯಾದವ್, ಬಿಜೆಪಿ ಸರ್ಕಾರ ರೈತ ವಿರೋಧಿ ಎಂದು ಆರೋಪಿಸಿದ್ದು, ಶೀಘ್ರವೇ ಸರ್ಕಾರವನ್ನು ಜನತೆ ಬದಲಾಯಿಸಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರು ರೈತರ ಮೇಲೆ ವಾಹನ ಹರಿಸಿ ಹತ್ಯೆ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿರುವುದು ಗೊಬ್ಬರ ಕಳ್ಳ ಸರ್ಕಾರವಾಗಿದೆ. ಬೆಲೆ ಏರಿಕೆ ಹಾಗೂ ಕೀಟನಾಶಕಗಳ ಬೆಲೆ ಏರಿಕೆಯ ಹಿಂದಿದೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ನಕಲಿ ಬಾಬ ಎಂದು ಹೇಳಿರುವ ಅಖಿಲೇಶ್ ಯಾದವ್ 2022 ರ ಚುನಾವಣೆಯ ಹಿನ್ನೆಲೆಯಲ್ಲಿ ಎಸ್ ಪಿ ಪಕ್ಷದಿಂದ ಆಯೋಜಿಸಲಾಗಿದ್ದ "ರಥಯಾತ್ರೆ"ಯಲ್ಲಿ ಮಾತನಾಡುತ್ತ, ನಕಲಿ ಬಾಬ ಅವರನ್ನು ಶೀಘ್ರವೇ ಹುದ್ದೆಯಿಂದ ಕೆಳಗಿಳಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com