ನವದೆಹಲಿ: ಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ, ಏಮ್ಸ್ ಡಾಕ್ಟರ್ ವಿರುದ್ದ ಕೇಸ್ ದಾಖಲು
ದೇಶದ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಒಳಗಡೆ ಹಿರಿಯ ವೈದ್ಯರೊಬ್ಬರಿಂದ ತಮ್ಮ ಮೇಲೆ ಅತ್ಯಾಚಾರವಾಗಿರುವುದಾಗಿ ಇದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ವೈದ್ಯೆಯೊಬ್ಬರು ಆರೋಪಿಸಿದ ನಂತರ ದೆಹಲಿ ಪೊಲೀಸರು ಕೇಸ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
Published: 15th October 2021 08:46 PM | Last Updated: 16th October 2021 01:14 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಒಳಗಡೆ ಹಿರಿಯ ವೈದ್ಯರೊಬ್ಬರಿಂದ ತಮ್ಮ ಮೇಲೆ ಅತ್ಯಾಚಾರವಾಗಿರುವುದಾಗಿ ಇದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ವೈದ್ಯೆಯೊಬ್ಬರು ಆರೋಪಿಸಿದ ನಂತರ ಕೇಸ್ ದಾಖಲಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಸೆಪ್ಟೆಂಬರ್ 26 ರಂದು ಸಹೋದ್ಯೋಗಿಯೊಬ್ಬರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲು ತೀವ್ರ ಪ್ರಯತ್ನ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.
ಅಕ್ಟೋಬರ್ 11 ರಂಂದು ಘಟನೆ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದು, ಸಂತ್ರಸ್ತೆ ನೀಡಿದ ಹೇಳಿಕೆ ಆಧಾರದ ಮೇಲೆ ಐಪಿಸಿ ಸೆಕ್ಷನ್ 376 (ಅತ್ಯಾಚಾರಕ್ಕಾಗಿ ಶಿಕ್ಷೆ) 377 ( ಅಸ್ವಾಭಾವಿಕ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ದಕ್ಷಿಣ ಡಿಸಿಪಿ ಬೆನಿತಾ ಮೇರಿ ಜೈಕರ್ ತಿಳಿಸಿದ್ದಾರೆ.