ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯಲ್ಲಿ 101ನೇ ಸ್ಥಾನಕ್ಕೆ ಭಾರತ ಕುಸಿತ: ಮೋದಿಗೆ ಕಪಿಲ್ ಸಿಬಲ್ ಅಭಿನಂದನೆ!

ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿಯಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ಮುಖಂಡ ಕಪಿಲ್‌ ಸಿಬಲ್‌ 'ಅಭಿನಂದನೆ' ಸಲ್ಲಿಸಿದ್ದಾರೆ.
ಕಪಿಲ್ ಸಿಬಲ್
ಕಪಿಲ್ ಸಿಬಲ್

ಬೆಂಗಳೂರು: ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿಯಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ಮುಖಂಡ ಕಪಿಲ್‌ ಸಿಬಲ್‌ 'ಅಭಿನಂದನೆ' ಸಲ್ಲಿಸಿದ್ದಾರೆ.

'ರಾಷ್ಟ್ರದ ಬಡತನ ಮತ್ತು ಹಸಿವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದ್ದಕ್ಕೆ ಮೋದಿ ಜೀ ಅವರಿಗೆ ಅಭಿನಂದನೆಗಳು' ಎಂದು ವ್ಯಂಗ್ಯವಾಗಿ ಟ್ವೀಟ್‌ ಮಾಡಿರುವ ಕಪಿಲ್‌ ಸಿಬಲ್‌, ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನೇಪಾಳ ರಾಷ್ಟ್ರಗಳಿಗಿಂತ ಭಾರತ ಹಿಂದಿರುವುದನ್ನು ಒತ್ತಿ ಹೇಳಿದ್ದಾರೆ. 

'ಅಭಿನಂದನೆಗಳು ಮೋದಿ ಜೀ ಬಡತನ , ಹಸಿವು,  ಭಾರತವನ್ನು ಜಾಗತಿಕ ಶಕ್ತಿಯಾಗಿ ನಿರ್ಮಾಣ ಮಾಡುವಲ್ಲಿ  ನಮ್ಮ ಡಿಜಿಟಲ್‌ ಆರ್ಥಿಕತೆ ... ಹೀಗೆ  ಇವುಗಳನ್ನು ತೊಡೆದುಹಾಕಿದ್ದಕ್ಕೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ. 2020 ರಲ್ಲಿ ಭಾರತ 94ನೇ ರ‍್ಯಾಂಕ್‌ 2021: ಭಾರತ 101ನೇ ರ‍್ಯಾಂಕ್‌ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನೇಪಾಳಕ್ಕಿಂತ ಹಿಂದಿದ್ದೇವೆ.'' ಎಂದು ಕಪಿಲ್‌ ಸಿಬಲ್‌ ಟ್ವೀಟ್‌ ಮಾಡಿದ್ದಾರೆ.

ಹಸಿವು ಮತ್ತು ಅಪೌಷ್ಟಿಕತೆಯನ್ನು ಪತ್ತೆಹಚ್ಚುವ ಜಾಗತಿಕ ಹಸಿವು ಸೂಚ್ಯಂಕದ (ಜಿಎಚ್‌ಐ) ಪ್ರಕಾರ ಚೀನಾ, ಬ್ರೆಜಿಲ್ ಮತ್ತು ಕುವೈತ್ ಸೇರಿದಂತೆ 18 ದೇಶಗಳು ಐದು ಕ್ಕಿಂತ ಕಡಿಮೆ ಅಂಕಗಳೊಂದಿಗೆ ಅಗ್ರ ಶ್ರೇಣಿಯನ್ನು ಹಂಚಿಕೊಂಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com