ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಆರೋಗ್ಯ ಸ್ಥಿರ; ಚೇತರಿಕೆ: ಏಮ್ಸ್

ಅನಾರೋಗ್ಯದಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ -ಏಮ್ಸ್ ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಆಸ್ಪತ್ರೆ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಡಾ.ಮನ್ ಮೋಹನ್ ಸಿಂಗ್
ಡಾ.ಮನ್ ಮೋಹನ್ ಸಿಂಗ್

ನವದೆಹಲಿ: ಅನಾರೋಗ್ಯದಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ -ಏಮ್ಸ್ ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಆಸ್ಪತ್ರೆ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬುಧವಾರ ಏಮ್ಸ್ ಗೆ ದಾಖಲಾಗಿದ್ದ  ಡಾ. ಮನ್ ಮೋಹನ್ ಸಿಂಗ್ ವೈದ್ಯಕೀಯ ನಿಗಾವಣೆಯಲ್ಲಿದ್ದಾರೆ. ಸುಸ್ತಿನ ಕಾರಣದಿಂದ 89 ವರ್ಷದ ಕಾಂಗ್ರೆಸ್ ಹಿರಿಯ ಮುಖಂಡರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಆಸ್ಪತ್ರೆಗೆ ಭೇಟಿ ನೀಡಿ, ಡಾ. ಮನ್ ಮೋಹನ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು.

ಡಾ. ಮನ್ ಮೋಹನ್ ಸಿಂಗ್ ಅವರ ಆರೋಗ್ಯ ನಿನ್ನೆಗಿಂತ ಇಂದು ಉತ್ತಮವಾಗಿರುವುದಾಗಿ ಕಾಂಗ್ರೆಸ್ ವಕ್ತಾರ ಪ್ರಣವ್ ಜಾ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com