ದೇಶದ ಜನತೆಗೆ ವಿಜಯದಶಮಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದಾದ್ಯಂತ ವಿಜಯದಶಮಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ವಿಜಯದಶಮಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ವಿಜಯದಶಮಿ ಹಬ್ಬದ ವಿಶೇಷ ಸಂದರ್ಭದಲ್ಲಿ ಪ್ರತೀಯೊಬ್ಬರಿಗೂ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ. 

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟ್ವೀಟ್ ಮಾಡಿ, ವಿಜಯದಶಮಿಯ ಶುಭ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು. ದಸರಾ ಕೆಟ್ಟದ್ದರ ವಿರುದ್ಧ ಒಳ್ಳೆಯದು ವಿಜಯ ಸಾಧಿಸುವುದನ್ನು ಸೂಚಿಸುತ್ತದೆ. ಈ ಹಬ್ಬವು ನೈತಿಕತೆ, ಒಳ್ಳೆಯತನ ಮತ್ತು ಸದ್ಗುಣಗಳ ಹಾದಿಯಲ್ಲಿ ನಡೆಯಲು ನಮಗೆ ಸ್ಫೂರ್ತಿ ನೀಡುತ್ತದೆ. ಈ ಹಬ್ಬವು ದೇಶವಾಸಿಗಳ ಜೀವನದಲ್ಲಿ ಸಮೃದ್ಧಿ ಮತ್ತು ಸಂತೋಷವನ್ನು ತರಲಿ ಎಂದು ಆರೈಸುತ್ತೇನೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com