ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಉಗ್ರರ ಅಟ್ಟಹಾಸ: ಭಯೋತ್ಪಾದಕರ ದಾಳಿಗೆ ಸೇನಾಧಿಕಾರಿ, ಯೋಧ ಹುತಾತ್ಮ

4 ದಿನಗಳ ಹಿಂದಷ್ಟೇ ಉಗ್ರರ ದಾಳಿಗೆ 5 ಯೋಧರು ಹುತಾತ್ಮರಾದ ಬೆನ್ನಲ್ಲೇ ಗುರುವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಅಧಿಕಾರಿ ಹಾಗೂ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: 4 ದಿನಗಳ ಹಿಂದಷ್ಟೇ ಉಗ್ರರ ದಾಳಿಗೆ 5 ಯೋಧರು ಹುತಾತ್ಮರಾದ ಬೆನ್ನಲ್ಲೇ ಗುರುವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಅಧಿಕಾರಿ ಹಾಗೂ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.

ಉಗ್ರರ ವಿರುದ್ಧದ ಕೂಂಬಿಂಗ್ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಜಮ್ಮು-ಪೂಂಚ್, ರಾಜೌರಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ ಎಂದು ವರದಿ ಹೇಳಿದೆ. 

ಅಕ್ಟೋಬರ್ 10ರಂದು ರಾತ್ರಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಎನ್ ಕೌಂಟರ್ ನಡೆದಿದ್ದು, ಅದೇ ಉಗ್ರರ ಗುಂಪು ಮತ್ತೆ ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.

ಅಕ್ಟೋಬರ್ 10ರಂದು ನಡೆದ ದಾಳಿಯಲ್ಲಿ ಸೇನಾ ಅಧಿಕಾರಿ ಹಾಗೂ ನಾಲ್ವರು ಯೋಧರು ಹುತಾತ್ಮರಾಗಿದ್ದರು. ಪೂಂಚ್ ಜಿಲ್ಲೆಯ ಮೆಂಧಾರ್ ಸಬ್ ಡಿವಿಷನ್ ನ ನಾರ್ ಖಾಸ್ ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಸೇನೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಉಗ್ರರ ಗುಂಪನ್ನು ಯೋಧರು ಕಳೆದ ನಾಲ್ಕು ದಿನಗಳಿಂದ ಬೆನ್ನಟ್ಟಿದ್ದರೂ ಕೂಡಾ ಬೃಹತ್ ಬೆಟ್ಟ ಮತ್ತು ಅರಣ್ಯ ಪ್ರದೇಶಗಳಿಂದ ಆವೃತ್ತವಾಗಿದ್ದು, ಇದರಿಂದಾಗಿ ಉಗ್ರರನ್ನು ಪತ್ತೆ ಹಚ್ಚುವುದಕ್ಕೆ ತೊಂದರೆಯಾಗುತ್ತಿರುವುದಾಗಿ ವರದಿ ಹೇಳಿದೆ. ಏತನ್ಮಧ್ಯೆ ಉಗ್ರರು ಮತ್ತು ಸೇನೆ ಮುಖಾಮುಖಿಯಾದಾಗ ಎನ್ ಕೌಂಟರ್ ನಡೆದಿರುವುದಾಗಿ ವರದಿ ವಿವರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com