ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ, ಮತ್ತೆ ಇಬ್ಬರನ್ನು ಗುಂಡಿಕ್ಕಿ ಕೊಂದ ಉಗ್ರರು

ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದ್ದು, ಶ್ರೀನಗರ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಸ್ಥಳೀಯರಲ್ಲದ ಮತ್ತೆ ಇಬ್ಬರು ನಾಗರಿಕರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದ್ದು, ಶ್ರೀನಗರ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಸ್ಥಳೀಯರಲ್ಲದ ಮತ್ತೆ ಇಬ್ಬರು ನಾಗರಿಕರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಿಹಾರದ ಬಂಕಾ ಪ್ರದೇಶದ ನಿವಾಸಿ ಅರವಿಂದ್ ಕುಮಾರ್ ಸಾಹ್(30) ಅವರನ್ನು ಶ್ರೀನಗರದ ಈದ್ಗಾದಲ್ಲಿರುವ ಉದ್ಯಾನವನದ ಹೊರಗೆ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇನ್ನೊಂದು ಘಟನೆಯಲ್ಲಿ, ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಉತ್ತರ ಪ್ರದೇಶ ಮೂಲದ ಬಡಗಿ ಸಗೀರ್ ಅಹ್ಮದ್ ಮೇಲೆ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅಹ್ಮದ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು ಎಂದು ಅವರು ತಿಳಿಸಿದ್ದಾರೆ.

ಕಳೆದ ವಾರ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರ ಹತ್ಯೆಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರನ್ನು 24 ಗಂಟೆಗಳ ಅವಧಿಯಲ್ಲಿ ಹೊಡೆದುರುಳಿಸಿದ್ದೇವೆ ಎಂದು ಪೊಲೀಸರು ಹೇಳಿಕೊಂಡ ದಿನದಂದೇ ಈ ಹತ್ಯೆಗಳು ನಡೆದಿವೆ.

ಇಂದು ನಡೆದ ನಾಗರಿಕರ ಹತ್ಯೆಗಳನ್ನು ಬಿಜೆಪಿ ಖಂಡಿಸಿದೆ.  ಇಬ್ಬರು ಸ್ಥಳೀಯರಲ್ಲದವರ ಹತ್ಯೆ ಅತ್ಯಂತ ಖಂಡನೀಯ ಮತ್ತು ಆಘಾತಕಾರಿ ಎಂದು ಪಕ್ಷದ ಬಿಜೆಪಿ ವಕ್ತಾರ ಅಲ್ತಾಫ್ ಠಾಕೂರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com