ನವೆಂಬರ್ 5 ರಂದು ಕೇದಾರನಾಥ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 5 ರಂದು ಕೇದಾರನಾಥ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಕೇದಾರನಾಥ ಕ್ಷೇತ್ರದಲ್ಲಿ ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
ಕೇದಾರನಾಥ ಕ್ಷೇತ್ರದಲ್ಲಿ ಪ್ರಧಾನಿ ಮೋದಿ (ಸಂಗ್ರಹ ಚಿತ್ರ)

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 5 ರಂದು ಕೇದಾರನಾಥ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ವೇಳೆ ಮೋದಿ 250 ಕೋಟಿ ರೂಪಾಯಿ ಮೌಲ್ಯದ ಕೇದಾರ ಪುರಿ ಮರು ನಿರ್ಮಾಣ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಉತ್ತರಾಖಂಡ್ ನಲ್ಲಿರುವ ತೀರ್ಥಕ್ಷೇತ್ರವಿರುವ ಜಿಲ್ಲೆಗೆ ಒಂದೇ ತಿಂಗಳ ಅವಧಿಯಲ್ಲಿ ಪ್ರಧಾನಿ ಮೋದಿ ಅವರ 2ನೇ ಭೇಟಿ ಇದಾಗಿದೆ. ಅ.07 ರಂದು ಹೃಷಿಕೇಶದ ಏಮ್ಸ್ ಗೆ ಪ್ರಧಾನಿ ಮೋದಿ ಭೇಟಿ ನೀಡಿ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದ್ದರು.

ಮುಂದಿನ ತಿಂಗಳು ಪ್ರಧಾನಿ ಮೋದಿ ಅವರ ಭೇಟಿಯನ್ನು ಸಿಎಂ ಪುಷ್ಕರ್ ಸಿಂಗ್ ಧಾಮಿ ಖಚಿತಪಡಿಸಿದ್ದು ಕೇದಾರನಾಥ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ಆದಿ ಗುರು ಶಂಕರಾಚಾರ್ಯರ ಸಮಾಧಿಯ ಪುನರ್ನಿರ್ಮಾಣ ಪ್ರದೇಶವನ್ನು ಉದ್ಘಾಟಿಸಲಿದ್ದಾರೆ.

ಇದೇ ವೇಳೆ ಕೇದಾರಪುರಿ ಮರುನಿರ್ಮಾಣದ 2 ನೇ ಹಂತದ 150 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಿಎಂ ಧಾಮಿ ಹೇಳಿದ್ದಾರೆ. 2014 ರಿಂದ ಪ್ರಧಾನಿ ಮೋದಿ ಹಲವು ಬಾರಿ ಕೇದಾರನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com