ಕಾಶ್ಮೀರ: ಭದ್ರತಾ ಪಡೆಗಳಿಂದ ಲಷ್ಕರ್-ಎ-ತೊಯ್ಬಾದ ಪ್ರಮುಖ ಉಗ್ರನ ಹತ್ಯೆ

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಾಂಪೋರೆ ಪ್ರದೇಶದಲ್ಲಿ ಶನಿವಾರ ಮುಂಜಾನೆ ಕೇಂದ್ರೀಯ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾದ ಟಾಪ್‌ ಕಮಾಂಡರ್ ಹತನಾಗಿದ್ದಾನೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪುಲ್ವಾಮಾ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಾಂಪೋರೆ ಪ್ರದೇಶದಲ್ಲಿ ಶನಿವಾರ ಮುಂಜಾನೆ ಕೇಂದ್ರೀಯ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾದ ಟಾಪ್‌ ಕಮಾಂಡರ್ ಹತನಾಗಿದ್ದಾನೆ.

ಭಗತ್, ಶ್ರೀನಗರ ಪ್ರದೇಶದಲ್ಲಿ ಇಬ್ಬರು ಪೊಲೀಸರನ್ನು ಹತ್ಯೆ ನಡೆಸಿದ್ದ ಲಷ್ಕರ್-ಎ-ತೊಯ್ಬಾ ಟಾಪ್ ಕಮಾಂಡರ್ ಉಮರ್ ಮುಸ್ತಾಕ್ ಖಾಂಡೆಯನ್ನು ಶನಿವಾರ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ ಎಂದು ಕಾಶ್ಮೀರ ಪೊಲೀಸ್ ಐಜಿ ವಿಜಯಕುಮಾರ್ ಹೇಳಿದ್ದಾರೆ.

ಪಾಂಪೋರೆ ಬಳಿಯ ಡ್ರಾಂಗ್ ಬಲ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಐಜಿ ಟ್ವೀಟ್ ಮಾಡಿದ್ದಾರೆ. 

ಲಷ್ಕರ್-ಎ-ತೊಯ್ಬಾದ ಟಾಪ್ ಟೆನ್ ಕಮಾಂಡರ್ ಗಳಾದ ಸಲೀಂ ಪರ್ರೆ, ಯೂಸುಫ್ ಕಾಂಟ್ರೋ, ಅಬ್ಬಾಸ್ ಶೇಖ್, ರಿಯಾಜ್ ಶೆತರ್ ಗುಂಡ್, ಫಾರೂಕ್ ನಲಿ, ಜುಬೈರ್ ವಾನಿ, ಅಶ್ರಫ್ ಮೌಲ್ವಿ ಹಾಗೂ ಸಾಖಿಬ್ ಮಂಜೂರ್ ವಕೀಲ್‌ ಶಾ ಪತ್ತೆಗಾಗಿ ಭದ್ರತಾ ಪಡೆಗಳು ಶೋಧನಾ ಕಾರ್ಯಾಚರಣೆ ತೀವ್ರಗೊಳಿಸಿವೆ ಎಂದು ಐಜಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com