ನಾಳೆ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ, ವಿಧಾನಸಭೆ ಚುನಾವಣೆ, ರೈತರ ಪ್ರತಿಭಟನೆ ಕುರಿತು ಚರ್ಚೆ ಸಾಧ್ಯತೆ
ಅಕ್ಟೋಬರ್ 18, 2021 ರ ಸೋಮವಾರದಂದು ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಂದ ಹಿಡಿದು ರೈತರ ಪ್ರತಿಭಟನೆ.......
Published: 17th October 2021 07:57 PM | Last Updated: 17th October 2021 07:57 PM | A+A A-

ಜೆಪಿ ನಡ್ಡಾ
ನವದೆಹಲಿ: ಅಕ್ಟೋಬರ್ 18, 2021 ರ ಸೋಮವಾರದಂದು ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಂದ ಹಿಡಿದು ರೈತರ ಪ್ರತಿಭಟನೆ ಮತ್ತು ಕೋವಿಡ್ -19 ಸಾಂಕ್ರಾಮಿಕದವರೆಗೆ ಹಲವು ಸಮಸ್ಯೆಗಳ ಕುರಿತು ಚರ್ಚಿಸಲಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಸಭೆಯಲ್ಲಿ ಪಕ್ಷದ ವಕ್ತಾರರಲ್ಲದೆ ರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಥಿಕ ಜವಾಬ್ದಾರಿಗಳನ್ನು ಹೊಂದಿರುವ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ.
ಇದನ್ನು ಓದಿ: 'ಮನೆಮುರುಕ' ಸಿದ್ದರಾಮಯ್ಯನವರು ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ: ಬಿಜೆಪಿ ಸರಣಿ ಟ್ವೀಟ್ ವಾರ್
ಕೋವಿಡ್ -19 ಸಾಂಕ್ರಾಮಿಕ, ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಮುಂದಿನ ತಿಂಗಳು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೂ ಮುನ್ನ ಈ ಸಭೆ ನಡೆಯುತ್ತಿರುವುದರಿಂದ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ, ಲಖಿಂಪುರ್ ಖೇರಿಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಘಟನೆ ಮತ್ತು ರೈತರ ಪ್ರತಿಭಟನಾ ಸ್ಥಳಗಳಲ್ಲಿ ಒಂದಾದ ಸಿಂಘು ಗಡಿಯಲ್ಲಿ ದಲಿತನ ಹತ್ಯೆಯೂ ಚರ್ಚೆಯಲ್ಲಿ ಕಾಣಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.