ಕೇಂದ್ರ ಸರ್ಕಾರ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸುತ್ತಿದೆ: ಶರದ್ ಪವಾರ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಯಾವುದೇ ಸಮಯದಲ್ಲೂ ನೌಕರರನ್ನು ಸೇವೆಯಿಂದ ತೆಗೆದುಹಾಕಲು...
ಶರದ್ ಪವಾರ್
ಶರದ್ ಪವಾರ್

ಪುಣೆ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಯಾವುದೇ ಸಮಯದಲ್ಲೂ ನೌಕರರನ್ನು ಸೇವೆಯಿಂದ ತೆಗೆದುಹಾಕಲು ಕಾನೂನಿನಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ಭಾನುವಾರ ಹೇಳಿದ್ದಾರೆ.

ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿರುವವರು ಅಧಿಕಾರದಲ್ಲಿ ಇರಬಾರದು ಎಂದು ಶರದ್ ಪವಾರ್ ಅವರು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ಮಹಾರಾಷ್ಟ್ರಕ್ಕೆ ಜಿಎಸ್‌ಟಿ ಬಾಕಿ ಬಿಡುಗಡೆ ಮಾಡದೆ ಆರ್ಥಿಕ ಸಂಕಷ್ಟ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಪವಾರ್ ಆರೋಪಿಸಿದ್ದಾರೆ.

ಪುಣೆ ಸಮೀಪದ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪವಾರ್, ಹಿಂದೂಸ್ತಾನ್ ಆ್ಯಂಟಿಬಯಾಟಿಕ್‌(HA) ಹಾಗೂ ಇತರೆ ಹಲವು ಆಟೋಮೊಬೈಲ್ ಕಂಪನಿಗಳನ್ನು ಹೇಗೆ ಸ್ಥಾಪಿಸಲಾಯಿತು ಎಂಬುದನ್ನು ತಿಳಿಸಿದರು.

"ಈಗಿನ ಕೇಂದ್ರ ಸರ್ಕಾರವು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿದೆ. ಈಗ ಯಾರನ್ನು ಬೇಕಾದರೂ ಕೆಲಸದಿಂದ ಹೊರಹಾಕಬಹುದು. ಕೇಂದ್ರದ ಬಿಜೆಪಿ ಸರ್ಕಾರವು ಕಾನೂನಿನಲ್ಲಿ ಬದಲಾವಣೆಗಳನ್ನು ತರುತ್ತಿದೆ. ಇದರಿಂದ ಕಾರ್ಮಿಕರನ್ನು ಯಾವುದೇ ಸಮಯದಲ್ಲಿ ಸೇವೆಯಿಂದ ತೆಗೆದುಹಾಕಬಹುದು. ಈ ಕ್ರಮ ಶೇ. 100 ಕಾರ್ಮಿಕರ ಹಿತಾಸಕ್ತಿಗಾಗಿ ಅಲ್ಲ" ಎಂದರು.

"ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿರುವವರು ಅಧಿಕಾರದಲ್ಲಿರಬಾರದು... ನಾವೆಲ್ಲರೂ ಇದನ್ನು ಅವರಿಗೆ ಹೇಳಬೇಕು ಮತ್ತು ಈ ಬಲವಾದ ಸಂದೇಶವನ್ನು ನೀಡುವ ನಗರಗಳಲ್ಲಿ ಪಿಂಪ್ರಿ ಚಿಂಚ್‌ವಾಡ್ ಸಹ ಒಂದಾಗಬೇಕು" ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com