ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ರೆಡ್ ಅಲರ್ಟ್ ಘೋಷಿಸಿದ ಐಎಂಡಿ; ತುರ್ತು ಪರಿಸ್ಥಿತಿ ಸಿದ್ಧತೆಗೆ ಸೂಚನೆ!

ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಅಕ್ಟೋಬರ್ 18ರಂದು ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಡೆಹ್ರಾಡೂನ್​​​: ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಅಕ್ಟೋಬರ್ 18ರಂದು ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 17ರಿಂದ 19ರವರೆಗೆ ರಾಜ್ಯದಲ್ಲಿ ಆರೆಂಜ್​​ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಸೋಮವಾರ ಚಮೋಲಿ ಮತ್ತು ಉತ್ತರಕಾಶಿಯ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿದೆ.

ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಬಳಿಕ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಾನುವಾರ ಎಲ್ಲಾ ಪೊಲೀಸ್ ಅಧಿಕಾರಿಗಳು, ಎಸ್‌ಡಿಆರ್‌ಎಫ್ ಮತ್ತು ಇತರ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com