ಆಗ್ರಾ ಪೊಲೀಸ್ ಠಾಣೆಯಲ್ಲಿ 25 ಲಕ್ಷ ರೂಪಾಯಿ ಕಳ್ಳತನ: ಆರು ಪೊಲೀಸರ ಅಮಾನತು

ಜಗದೀಶಪುರ ಪೊಲೀಸ್ ಠಾಣೆಯಲ್ಲಿದ್ದ 25 ಲಕ್ಷ ರೂಪಾಯಿ ನಗದು ಕಳ್ಳತನವಾದ ನಂತರ ಆರು ಪೊಲೀಸ್ ಸಿಬ್ಬಂದಿಯನ್ನು ಭಾನುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಆಗ್ರಾ: ಜಗದೀಶಪುರ ಪೊಲೀಸ್ ಠಾಣೆಯಲ್ಲಿದ್ದ 25 ಲಕ್ಷ ರೂಪಾಯಿ ನಗದು ಕಳ್ಳತನವಾದ ನಂತರ ಆರು ಪೊಲೀಸ್ ಸಿಬ್ಬಂದಿಯನ್ನು ಭಾನುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಣ ಕಳ್ಳತನವಾದ ನಂತರ "ನಿರ್ಲಕ್ಷ್ಯ" ವಹಿಸಿದ ಆರೋಪದ ಮೇಲೆ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಸೇರಿದಂತೆ ಆರು ಪೊಲೀಸ್ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. 
ಜಗದೀಶ್‌ಪುರ ಪೊಲೀಸ್ ಠಾಣೆಯ 'ಮಾಲ್ಖಾನ'(ಜಪ್ತಿ ಮಾಡಿದ ವಸ್ತುಗಳನ್ನು ಪೊಲೀಸರು ಸಂಗ್ರಹಿಸಿರುವ ಸ್ಥಳ)ದಿಂದ 25 ಲಕ್ಷ ರೂಪಾಯಿ ಕಳ್ಳತನವಾಗಿದೆ ಎಂದು ಆಗ್ರಾ ವಲಯದ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ), ರಾಜೀವ್ ಕೃಷ್ಣ ಅವರು ಹೇಳಿದ್ದಾರೆ.

ಈ ಘಟನೆ ಶನಿವಾರ ರಾತ್ರಿ ನಡೆದಿದೆ. ಸುಮಾರು ನಾಲ್ಕು ದಿನಗಳ ಹಿಂದೆ, ಪೊಲೀಸ್ ಠಾಣೆಯಲ್ಲಿ ಒಂದು ಕ್ರಿಮಿನಲ್ ಪ್ರಕರಣದಲ್ಲಿ 24 ಲಕ್ಷ ರೂಪಾಯಿ ಮತ್ತು ನಾಲ್ಕು ಕೆಜಿ ಚಿನ್ನವನ್ನು ಜಪ್ತಿ ಮಾಡಲಾಗಿತ್ತು. ಅದಲ್ಲದೆ ಗೋದಾಮಿನಲ್ಲಿ ಹಿಂದಿನ ಕ್ರಿಮಿನಲ್ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸಹ ನಗದು ಇತ್ತು" ಎಂದು ಅವರು ತಿಳಿಸಿದ್ದಾರೆ.

"ಗೋದಾಮಿನಲ್ಲಿ ಇರಿಸಲಾಗಿರುವ ಚಿನ್ನ ಮತ್ತು ಶಸ್ತ್ರಾಸ್ತ್ರಗಳು ಕಾಣೆಯಾಗಿಲ್ಲ. ಆದರೆ ನಗದು ಮಾತ್ರ ಕಾಣೆಯಾಗಿದೆ" ಎಂದು ಎಡಿಜಿ ಹೇಳಿದ್ದಾರೆ.

ಸ್ಟೇಷನ್ ಹೌಸ್ ಆಫೀಸರ್, ಸಬ್ ಇನ್ಸ್‌ಪೆಕ್ಟರ್, ಹೆಡ್ ಕ್ಲರ್ಕ್ ಮತ್ತು ಮೂವರು ಕಾನ್‌ಸ್ಟೇಬಲ್‌ಗಳನ್ನು "ನಿರ್ಲಕ್ಷ್ಯ" ತೋರಿದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com