ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ: ಮತ್ತೆ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಕೊಂದ ಉಗ್ರರು

ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದ್ದು, ಕುಲ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಮತ್ತೆ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಮತ್ತೊಬ್ಬರನ್ನು ಗಾಯಗೊಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದ್ದು, ಕುಲ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಮತ್ತೆ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಮತ್ತೊಬ್ಬರನ್ನು ಗಾಯಗೊಳಿಸಿದ್ದಾರೆ.

"ಕುಲ್ಗಾಂನ ವಾನ್ಪೋಹ್ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಹೊರ ರಾಜ್ಯದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಉಗ್ರರಿಗಾಗಿ ಪೊಲೀಸರು ಮತ್ತು ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿವೆ ಎಂದು ಅವರು ಹೇಳಿದ್ದಾರೆ.

ಅಧಿಕಾರಿಗಳ ಪ್ರಕಾರ, ಬಾಡಿಗೆ ಮನೆಯಲ್ಲಿದ್ದ ಕಾರ್ಮಿಕರ ಮೇಲೆ ಉಗ್ರರು ಮನಬಂದಂತೆ ಗುಂಡು ಹಾರಿಸಿದರು. ಕಳೆದ 24 ಗಂಟೆಗಳಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆದ ಮೂರನೇ ದಾಳಿ ಇದಾಗಿದೆ.

ನಿನ್ನೆ ಬಿಹಾರದ ಬೀದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಬಡಗಿಯನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com