ದುಷ್ಕರ್ಮಿಗಳಿಂದ ತಮಿಳುನಾಡು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ-ಮೇಲ್ ಸೃಷ್ಟಿ, ಕೇಸ್ ದಾಖಲು

ದುಷ್ಕರ್ಮಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆಗಳನ್ನು ಸೃಷ್ಟಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೋಲಿಸರಿಗೆ ದೂರು ನೀಡಲಾಗಿದೆ ಎಂದು ಭಾನುವಾರ ತಮಿಳುನಾಡು...
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ

ಚೆನ್ನೈ: ದುಷ್ಕರ್ಮಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆಗಳನ್ನು ಸೃಷ್ಟಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೋಲಿಸರಿಗೆ ದೂರು ನೀಡಲಾಗಿದೆ ಎಂದು ಭಾನುವಾರ ತಮಿಳುನಾಡು ರಾಜಭವನ ತಿಳಿಸಿದೆ.

"ಇತ್ತೀಚೆಗೆ ಕೆಲವು ದುಷ್ಕರ್ಮಿಗಳು ಗೌರವಾನ್ವಿತ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇಮೇಲ್ ಖಾತೆಗಳನ್ನು ಸೃಷ್ಟಿಸಿ ಆಕ್ಷೇಪಾರ್ಹ ವಿಷಯಗಳೊಂದಿಗೆ ಇ-ಮೇಲ್‌ಗಳನ್ನು ಕಳುಹಿಸುತ್ತಿದ್ದಾರೆ" ಎಂದು ರಾಜಭವನದ ಅಧಿಕೃತ ಪ್ರಕಟಣೆ ಹೇಳಿದೆ.

ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

"ರಾಜಭವನದ ಅಧಿಕೃತ ಇ-ಮೇಲ್ govtam@nic.in ಮತ್ತು ಅಧಿಕೃತ ಟ್ವಿಟರ್ ಖಾತೆ @rajbhavan_tn"ಆಗಿದ್ದು, ರಾಜಭವನದ ಅಧಿಕೃತ ಇ-ಮೇಲ್ ಅಥವಾ ಟ್ವಿಟರ್ ಖಾತೆಗಳನ್ನು ಹೊರತುಪಡಿಸಿ ಯಾವುದೇ ಖಾತೆಗಳನ್ನು ನಂಬಬೇಡಿ ಎಂದು ತಮಿಳುನಾಡು ರಾಜ್ಯಪಾಲರ ಕಚೇರಿ ಜನರಲ್ಲಿ ಮನವಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com