ಜಮ್ಮು-ಕಾಶ್ಮೀರ: ಗುಂಡೇಟು ಬಿದ್ದ ಸ್ಥಿತಿಯಲ್ಲಿ ಸಿಆರ್'ಪಿಎಫ್ ಯೋಧನ ಮೃತದೇಹ ಪತ್ತೆ!

ಜಮ್ಮು ಮತ್ತು ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ಗುಂಡೇಟು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಸಿಆರ್‌ಪಿಎಫ್ ಯೋಧನ ಮೃತದೇಹ ಪತ್ತೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ಗುಂಡೇಟು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಸಿಆರ್‌ಪಿಎಫ್ ಯೋಧನ ಮೃತದೇಹ ಪತ್ತೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. 

84 ನೇ ಬೆಟಾಲಿಯನ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಆರ್'ಪಿಎಫ್ ಯೋಧ ರಾಜೀವ್ ರಂಜನ್ ಎಂಬುವವರ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳಉ ಮಾಹಿತಿ ನೀಡಿದ್ದಾರೆ. 

ರಂಜನ್ ಅವರು ಬಿಹಾರ ರಾಜ್ಯದ ಛಾಪ್ರಾ ಜಿಲ್ಲೆಯ ಮೂಲದವರೆಂದೂ ಹೇಳಲಾಗುತ್ತಿದ್ದು, ಸರ್ವೀಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. 

ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com