ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ 

ಬಿಜೆಪಿ ತೊರೆದು ಟಿಎಂಸಿ ಸೇರಿರುವ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ, ಇಂದು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಾಬುಲ್ ಸುಪ್ರಿಯೋ
ಬಾಬುಲ್ ಸುಪ್ರಿಯೋ

ಹಲಿ: ಬಿಜೆಪಿ ತೊರೆದು ಟಿಎಂಸಿ ಸೇರಿರುವ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ, ಇಂದು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದೆಹಲಿಯಲ್ಲಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಬಾಬುಲ್ ಸುಪ್ರಿಯೋ, ಬಿಜೆಪಿ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸುಪ್ರಿಯೋ ಸಲ್ಲಿಸಿರುವ ರಾಜೀನಾಮೆಯನ್ನು ಸ್ಪೀಕರ್ ಓಂ ಬಿರ್ಲಾ ಅಂಗೀಕರಿಸಿದರು.

ರಾಜೀನಾಮೆ ಸಲ್ಲಿಸಿ ಹೊರಬಂದ ಬಾಬುಲ್ ಸುಪ್ರಿಯೋ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯೊಂದಿಗೆ ಅಧಿಕೃತವಾಗಿ ಸಂಬಂಧ ಕಡಿದುಕೊಳ್ಳುತ್ತಿರುವುದು ಮನಸ್ಸನ್ನು ಭಾರಗೊಳಿಸಿದೆ. ನನ್ನ ರಾಜಕೀಯ ಜೀವನ ಆರಂಭವಾಗಿದ್ದು ಬಿಜೆಪಿ ಪಕ್ಷದಿಂದ. ಈಗ ಆ ಪಕ್ಷವನ್ನು ತೊರೆಯುತ್ತಿರುವುದು ನನ್ನ ಪಾಲಿಗೆ ಅಷ್ಟು ಸುಲಭವಲ್ಲ ಎಂದು ಬಾಬುಲ್ ಸುಪ್ರಿಯೋ ಹೇಳಿದರು.

ನನ್ನ ಮೇಲೆ ನಂಬಿಕೆಯಿಟ್ಟು ಪಕ್ಷ ಮತ್ತು ಸರ್ಕಾರದಲ್ಲಿ ಜವಾಬ್ದಾರಿ ನೀಡಿದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಬಾಬುಲ್ ಸುಪ್ರಿಯೋ ಈ ವೇಳೆ ನುಡಿದರು. ನಾನು ಈಗ ಬಿಜೆಪಿ ಪಕ್ಷದ ಭಾಗವಲ್ಲ, ಹೀಗಾಗಿ ಪಕ್ಷದಿಂದ ಆಯ್ಕೆಯಾದ ಸಂಸದ ಸ್ಥಾನವನ್ನು ಉಳಿಸಿಕೊಳ್ಳುವುದು ನೈತಿಕವಾಗಿ ಸರಿಯಲ್ಲ. ಹೀಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಬಾಬುಲ್ ಸುಪ್ರಿಯೋ ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com