ದ್ವಾರಕಾ: ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಮಾಜಿ ಪ್ರಿಯಕರ

ಯುವತಿ ಯುವಕನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದ್ವಾರಕಾದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಯುವತಿ ಯುವಕನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದ್ವಾರಕಾದಲ್ಲಿ ನಡೆದಿದೆ.

ದ್ವಾರಕಾದಲ್ಲಿರುವ ಮಹಿಳೆಯ ಮನೆಯ ಬಳಿ ಆಕೆಯ ಮೇಲೆ ಹಲ್ಲೆ ಮಾಡಿ, ಚಾಕುವಿನಿಂದ ಇರಿದು ಕೊಲೆಗೈಯಲಾಗಿದೆ. ಪೊಲೀಸರ ಪ್ರಕಾರ, ಡಾಲಿ ಬಬ್ಬರ್​ಗೆ ವ್ಯಕ್ತಿ ಕನಿಷ್ಠ ಆರು ಬಾರಿಯಾದ್ರೂ  ಇರಿದಿದ್ದಾನೆ. ಸೋಮವಾರ ರಾತ್ರಿ ರಕ್ತದ ಮಡುವಿನಲ್ಲಿ ಯುವತಿ ಬಿದ್ದಿದ್ದಾಳೆ. 

ಆರೋಪಿ ಈ ಹಿಂದೆಯೂ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದ ಎಂದು ಆಕೆಯ ಕುಟುಂಬಸ್ಥರು ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಮೂವರು ಪುರುಷರು ಮಹಿಳೆ ಜೊತೆ ನಿಂತಿದ್ದಾರೆ. ನಂತರ ಅವರಲ್ಲಿ ಒಬ್ಬ ಅವಳಿಗೆ ಚಾಕುವಿನಿಂದ ಇರಿಯಲು ಆರಂಭಿಸಿದ್ದಾನೆ. ಈ ವೇಳೆ ಇತರರು ನೋಡುತ್ತಿದ್ದರು. ಅಲ್ಲಿನ ಸ್ಥಳೀಯರು ಮಹಿಳೆಯ ಕಿರುಚಾಟವನ್ನು ಕೇಳಿದರೂ, ಯಾರೂ ಆಕೆಗೆ ಸಹಾಯ ಮಾಡಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com