ಆರ್ಯನ್ ಖಾನ್ ನನ್ನು ವಿಚಾರಣೆಗೆ ಕರೆದೊಯ್ಯುತ್ತಿರುವ ಸಂಗ್ರಹ ಚಿತ್ರ
ದೇಶ
ಕ್ರೂಸ್ ಡ್ರಗ್ಸ್ ಪ್ರಕರಣ: ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಆರ್ಯನ್ ಖಾನ್
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರು...
ಮುಂಬೈ: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರು ಬುಧವಾರ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಇದಕ್ಕು ಮುನ್ನ ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ಎನ್ ಡಿಪಿಎಸ್ ನ್ಯಾಯಾಲಯ ತಿರಸ್ಕರಿಸಿತ್ತು. ಆರ್ಯನ್ ಖಾನ್ ಪರ ವಕೀಲರು ತಕ್ಷಣವೇ ಎನ್ ಡಿಪಿಎಸ್ ವಿಶೇಷ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣ ಸಂಬಂಧ ಬಂಧಿತ ಆರ್ಯನ್ ಖಾನ್ ಮತ್ತು ಇನ್ನಿಬ್ಬರಿಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ಇಂದು ನಿರಾಕರಿಸಿದೆ.
ಈ ಪ್ರಕರಣದ ಆರೋಪಿ ಆರ್ಯನ್ ಖಾನ್ ಮತ್ತು ಇತರರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8 (ಸಿ), 20 (ಬಿ), 27, 28, 29 ಮತ್ತು 35ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ