ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇದರೊಂದಿಗೆ, ಕೇಂದ್ರಾಡಳಿತ ಪ್ರದೇಶದಲ್ಲಿ ಕಳೆದ 15 ದಿನಗಳಲ್ಲಿ ಇಂದು ನಾಲ್ವರು...
ಭಾರತೀಯ ಸೇನೆ
ಭಾರತೀಯ ಸೇನೆ
Updated on

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇದರೊಂದಿಗೆ, ಕೇಂದ್ರಾಡಳಿತ ಪ್ರದೇಶದಲ್ಲಿ ಕಳೆದ 15 ದಿನಗಳಲ್ಲಿ ಇಂದು ನಾಲ್ವರು ಸೇರಿದಂತೆ 17 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

ಭದ್ರತಾ ಪಡೆಗಳ ಜಂಟಿ ತಂಡಗಳಿಂದ ಶೋಧ ಕಾರ್ಯಾಚರಣೆಯಲ್ಲಿ ಕುಲ್ಗಾಮ್ ನ ದೇವ್‌ಸರ್ ನಲ್ಲಿ ಗುಂಡಿನ ಚಕಮಕಿ ನಡೆಯಿತು ಎಂದು ಅವರು ಹೇಳಿದ್ದಾರೆ.

ಪಿಟಿಐ ಪ್ರಕಾರ, ಭಯೋತ್ಪಾದಕರು ಲಷ್ಕರ್-ಎ-ತೊಯ್ಬಾಗೆ ಸೇರಿದ ದಿ ರೆಸಿಸ್ಟೆನ್ಸ್ ಫ್ರಂಟ್(TRF) ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ ಓರ್ವ ಇತ್ತೀಚಿಗೆ ಶೋಪಿಯಾನ್‌ನಲ್ಲಿ ನಡೆದ ಉತ್ತರ ಪ್ರದೇಶದ ಸಹರಾನ್‌ಪುರದ ಬಡಗಿ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ಪಿಟಿಐ ಉಲ್ಲೇಖಿಸಿದೆ.

ಇದಕ್ಕು ಮುನ್ನ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್'ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com