ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ: ಆಚರಣೆಗಾಗಿ ಕೇಂದ್ರ ಆರೋಗ್ಯ ಸಚಿವರಿಂದ ಹಾಡು ಬಿಡುಗಡೆ

ದೇಶದಲ್ಲಿ 100 ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡುವ ಗುರಿಯನ್ನು ತಲುಪಿದ ಹಿನ್ನೆಲೆಯಲ್ಲಿ ಮತ್ತು ಅದನ್ನು ಆಚರಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು...
ಕೋವಿಡ್-19 ಲಸಿಕೆ ಪಡೆಯುತ್ತಿರುವ ಮಹಿಳೆ
ಕೋವಿಡ್-19 ಲಸಿಕೆ ಪಡೆಯುತ್ತಿರುವ ಮಹಿಳೆ

ನವದೆಹಲಿ: ದೇಶದಲ್ಲಿ 100 ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡುವ ಗುರಿಯನ್ನು ತಲುಪಿದ ಹಿನ್ನೆಲೆಯಲ್ಲಿ ಮತ್ತು ಅದನ್ನು ಆಚರಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಒಂದು ಹಾಡನ್ನು ಗುರುವಾರ ಬಿಡುಗಡೆ ಮಾಡಲಿದ್ದಾರೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಕೇಂದ್ರ ಸಚಿವ ಮಾಂಡವಿಯಾ ಅವರು ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಲ್ಲಿ ಒಂದು ಆಡಿಯೋ ಮತ್ತು ಆಡಿಯೋವಿಶುವಲ್ ಚಲನಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ.

ಲಸಿಕೆಯ ಬಗ್ಗೆ ಇರುವ ತಪ್ಪು ಗ್ರಹಿಕೆ ಮತ್ತು ಪಡೆಯುವುದರ ಬಗೆಗಿನ ಹಿಂಜರಿಕೆಯನ್ನು ನಿವಾರಿಸಲು ಗಾಯಕ ಕೈಲಾಶ್ ಖೇರ್ ಅವರ ಹಾಡಿರುವ ಹಾಡು ಮತ್ತು ಆಡಿಯೋವಿಶುವಲ್ ಚಿತ್ರವನ್ನು ಮಾಂಡವಿಯಾ ಅವರು ನಾಳೆ ಬಿಡುಗಡೆ ಮಾಡಲಿದ್ದಾರೆ.

ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದಡಿ ಇದುವರೆಗೆ 99.12 ಕೋಟಿ ಡೋಸ್ ಲಸಿಕೆ ಹಾಕಲಾಗಿದ್ದು, ನಾಳೆ 100 ಕೋಟಿ ಡೋಸ್ ದಾಟುವ ನಿರೀಕ್ಷೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com