ಇತಿಹಾಸ ಬರೆದ ಭಾರತ: ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಹಲವು ಗಣ್ಯರ ಗುಣಗಾನ

ದೇಶದಲ್ಲಿ ಕೋವಿಡ್-19 ಲಸಿಕಾ ಅಭಿಯಾನದಡಿ 100 ಕೋಟಿ ಗೂ ಅಧಿಕ ಡೋಸ್ ಲಸಿಕೆ ನೀಡಿರುವುದರಿಂದ ಭಾರತ ಇತಿಹಾಸವನ್ನು ಬರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ಪ್ರಧಾನಿ ಮೋದಿ, ಅಮಿತ್ ಶಾ
ಪ್ರಧಾನಿ ಮೋದಿ, ಅಮಿತ್ ಶಾ

ನವದೆಹಲಿ: ದೇಶದಲ್ಲಿ ಕೋವಿಡ್-19 ಲಸಿಕಾ ಅಭಿಯಾನದಡಿ 100 ಕೋಟಿ ಗೂ ಅಧಿಕ ಡೋಸ್ ಲಸಿಕೆ ನೀಡಿರುವುದರಿಂದ ಭಾರತ ಇತಿಹಾಸವನ್ನು ಬರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ಈ ಲಸಿಕಾ ಅಭಿಯಾನ ಮೈಲುಗಲ್ಲು ಭಾರತದ ವಿಜ್ಞಾನ, ಉದ್ಯಮ ಮತ್ತು 130 ಕೋಟಿ ಭಾರತೀಯರ ಸಾಮೂಹಿಕ ಉತ್ಸಾಹದ ದಿಗ್ವಿಜಯವಾಗಿದೆ ಎಂದು ಪ್ರಧಾನಿ ಮೋದಿ ಗುಣಗಾನ ಮಾಡಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ಇತಿಹಾಸ ಬರೆದಿದೆ. ಭಾರತೀಯ ವಿಜ್ಞಾನ, ಉದ್ಯಮ ಮತ್ತು 130 ಕೋಟಿ ಭಾರತೀಯರ ಸಾಮೂಹಿಕ ಉತ್ಸಾಹದ ದಿಗ್ವಿಜಯಕ್ಕೆ ನಾವೆಲ್ಲ ಸಾಕ್ಷಿಯಾಗಿದ್ದೇವೆ. 100 ಕೋಟಿ ಲಸಿಕೆ ನೀಡಿರುವುದಕ್ಕೆ ಭಾರತಕ್ಕೆ ಅಭಿನಂದನೆಗಳು. ಇದನ್ನು ಸಾಧಿಸಲು ಕೆಲಸ ಮಾಡಿದ್ದ  ನಮ್ಮ ವೈದ್ಯರು, ನರ್ಸ್ ಗಳು ಹಾಗೂ ಎಲ್ಲರಿಗೂ ಕೃತಜ್ಞತೆಗಳು  ಎಂದಿದ್ದಾರೆ.

ಈ ಮೈಲುಗಲ್ಲು ಸಾಧನೆ ನಂತರ ಪ್ರಧಾನಿ ನರೇಂದ್ರ ಮೋದಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದು,  ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಹಾಗೂ ಆಸ್ಪತ್ರೆ ಸಿಬ್ಬಂದಿ ಜೊತೆಗೆ ಸಂವಾದ ನಡೆಸಿದ್ದಾರೆ. 

ಇದು ಐತಿಹಾಸಿಕ ಮತ್ತು ಗೌರವಪೂರ್ಣ ಕ್ಷಣವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. 

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಹಗಲಿರುಳು ಶ್ರಮಿಸಿದ ನಮ್ಮ ಮುಂಚೂಣಿ ಕಾರ್ಯಕರ್ತರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಈ ದೊಡ್ಡ ಯಶಸ್ವಿನಲ್ಲಿ ಭಾಗಿಯಾದಕ್ಕೆ ಎಲ್ಲಾ ನಾಗರಿಕರಿನ್ನು ಪ್ರಶಂಸಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com