ತೈಲ ಬೆಲೆ ಏರಿಕೆ ಪ್ರಮುಖ ವಿಚಾರವೇ ಅಲ್ಲ, 'ಶೇ.95 ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವಿಲ್ಲ': ಉತ್ತರ ಪ್ರದೇಶ ಸಚಿವ

ದೇಶದಲ್ಲಿ ತೈಲ ಬೆಲೆ ಏರಿಕೆಯಿಂದ ಜನರ ಜೇಬು ಸುಡುತ್ತಿದೆ ಎಂಬ ಟೀಕೆಗಳನ್ನು ತಳ್ಳಿಹಾಕಿದ ಉತ್ತರ ಪ್ರದೇಶ ಸಚಿವ ಉಪೇಂದ್ರ ತಿವಾರಿ ಅವರು, ಶೇಕಡಾ 95 ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ ಎಂದು ಗುರುವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಲಖನೌ: ದೇಶದಲ್ಲಿ ತೈಲ ಬೆಲೆ ಏರಿಕೆಯಿಂದ ಜನರ ಜೇಬು ಸುಡುತ್ತಿದೆ ಎಂಬ ಟೀಕೆಗಳನ್ನು ತಳ್ಳಿಹಾಕಿದ ಉತ್ತರ ಪ್ರದೇಶ ಸಚಿವ ಉಪೇಂದ್ರ ತಿವಾರಿ ಅವರು, ಶೇಕಡಾ 95 ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ ಎಂದು ಗುರುವಾರ ಹೇಳಿದ್ದಾರೆ.

2014 ರಲ್ಲಿ ತಲಾ ಆದಾಯಕ್ಕೆ ಹೋಲಿಸಿದರೆ ತೈಲ ಬೆಲೆಗಳು ನಿಜವಾಗಿಯೂ ಏರಿಕೆಯಾಗಿಲ್ಲ ಎಂದು ತಿವಾರಿ ವಾದಿಸಿದ್ದಾರೆ.

"ಇಂದು, ನಾಲ್ಕು-ಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಮತ್ತು ಪೆಟ್ರೋಲ್ ಬಳಸುವ ಕೆಲವೇ ಜನ ಇದ್ದಾರೆ. ಪ್ರಸ್ತುತ, ಶೇ. 95 ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವಿಲ್ಲ" ಎಂದು ತಿವಾರಿ ಜಲೌನ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆದಾಗ್ಯೂ, ತೈಲ ಬೆಲೆ ಏರಿಕೆ ವಾಸ್ತವಿಕವಾಗಿ ಪ್ರತಿಯೊಬ್ಬ ನಾಗರಿಕನ ಮೇಲೆ ಪರಿಣಾಮ ಬೀರುತ್ತದೆ. ಉದಾಹರಣೆಗೆ, ದೇಶದ ಇನ್ನೊಂದು ಭಾಗದಿಂದ ಮತ್ತೊಂದು ಭಾಗಕ್ಕೆ ಸಾಗಿಸುವ ಆಹಾರ ಧಾನ್ಯ, ಹಣ್ಣು ಮತ್ತು ತರಕಾರಿಗಳು ಸೇರಿದಂತೆ ಎಲ್ಲಾ ಸರಕುಗಳ ಬೆಲೆಯಲ್ಲಿ ಹೆಚ್ಚಳಕ್ಕೆ ಅದು ಕಾರಣವಾಗುತ್ತದೆ ಎಂದಿದ್ದಾರೆ.

ಪ್ರತಿಪಕ್ಷಗಳು ಸರ್ಕಾರವನ್ನು ಗುರಿಯಾಗಿಸುವ ಯಾವುದೇ ಸಮಸ್ಯೆ ಇಲ್ಲಿ ಇಲ್ಲ. “ನೀವು 2014 ರ ಮೊದಲು ಮತ್ತು ಈಗಿನ ಅಂಕಿಅಂಶಗಳನ್ನು ತೆಗೆದುಕೊಳ್ಳುತ್ತೀರಿ. ಮೋದಿಜಿ ಮತ್ತು ಯೋಗಿಜಿ ಸರ್ಕಾರಗಳು ರಚನೆಯಾದ ನಂತರ ತಲಾ ಆದಾಯವು ದ್ವಿಗುಣಗೊಂಡಿದೆ” ಎಂದು ಅವರು ಹೇಳಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತ ಎರಡನೇ ದಿನ ಏರಿಕೆಯಾಗಿ ಹೊಸ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿರುವ ಹೊತ್ತಲ್ಲಿಯೇ ಉತ್ತರ ಪ್ರದೇಶ ಸಚಿವರು ಈ ರೀತಿ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com