The New Indian Express
ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಸೌತ್ ಈಸ್ಟ್ ಪ್ರಾಂತ್ಯದ ನಿರ್ದೇಶಕಿ ಡಾ. ಪೂನಂ ಕೇತ್ರಪಾಲ್ ಸಿಂಗ್ ಭಾರತ 100 ಕೋಟಿ ಡೋಸ್ ಲಸಿಕೆ ನೀಡಿದ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಇದನ್ನೂ ಓದಿ: ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಮಹತ್ವದ ಮೈಲಿಗಲ್ಲು: ದೇಶದಲ್ಲಿ 100 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಿಕೆ
ಸದೃಢವಾದ ನಾಯಕತ್ವ ಇಲ್ಲದೆ ಅತಿ ಕಡಿಮೆ ಅವಧಿಯಲ್ಲಿ ಈ ಮಹತ್ತರವಾದ ಸಾಧನೆ ಮಾಡಲು ಖಂಡಿತಾ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕೆಲಸದಲ್ಲಿ ನೆರವಾದ ಎಲ್ಲಾ ಫ್ರಂಟ್ ಲೈನ್ ಕೊರೊನಾ ವಾರಿಯರ್ ಗಳಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಇತಿಹಾಸ ಬರೆದ ಭಾರತ: ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಹಲವು ಗಣ್ಯರ ಗುಣಗಾನ
ಜಗತ್ತಿನ ಇತರೆ ದೇಶಗಳಿಗೂ ಲಸಿಕೆ ಒದಗಿಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದೆ. ಅದರ ಹೊರತಾಗಿಯೂ ಭಾರತ ತನ್ನ ಜನರಿಗೆ 100 ಕೋಟಿ ಡೋಸ್ ಕೊರೊನಾ ಲಸಿಕೆಯನ್ನು ಅತಿ ಕಡಿಮೆ ಅವಧಿಯಲ್ಲಿ ಪೂರೈಸಿರುವುದು ಮಹತ್ತರವಾದ ಸಂಗತಿ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯಗಳ ಬಳಿ ಇನ್ನೂ 10.42 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ