ಲಖಿಂಪುರ್ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾ, ಬಂಧನಕ್ಕೆ ಆಗ್ರಹಿಸಿ ಅ.26 ರಂದು ದೇಶಾದ್ಯಂತ ಎಸ್ಕೆಎಂ ಪ್ರತಿಭಟನೆ
ಲಖಿಂಪುರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ ) ಅಕ್ಟೋಬರ್ 26 ರಂದು...
Published: 22nd October 2021 11:13 PM | Last Updated: 23rd October 2021 01:40 PM | A+A A-

ಅಜಯ್ ಮಿಶ್ರಾ
ಲಖನೌ: ಲಖಿಂಪುರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ ) ಅಕ್ಟೋಬರ್ 26 ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ಎಸ್ಕೆಎಂ ಹಾಗೂ ಹಲವು ರೈತ ಸಂಘಗಳು ಕೇಂದ್ರ ಸರ್ಕಾರವು ತಮ್ಮ ಕಾನೂನುಬದ್ಧ ಬೇಡಿಕೆಗಳನ್ನು ಈಡೇರಿಸುವಂತೆ ನಿರಂತರವಾಗಿ ಒತ್ತಾಯ ಮಾಡಿಕೊಂಡೇ ಬರುತ್ತಿವೆ. ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧದ ರೈತರ ಪ್ರತಿಭಟನೆ 12ನೇ ತಿಂಗಳಿಗೆ ಕಾಲಿಡುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ ಕೆಎಂ ಕೇಂದ್ರ ಸಚಿವರ ವಿರುದ್ಧ ಮತ್ತು ಕೃಷಿ ಕಾನೂನುಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ.
ಇದನ್ನು ಓದಿ: ಲಖಿಂಪುರ್ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾ, ಬಂಧನಕ್ಕೆ ಆಗ್ರಹಿಸಿ ರೈತರಿಂದ ನಾಳೆ 'ರೈಲು ರೋಕೋ'
ಕೇಂದ್ರ ಸರ್ಕಾರ ತಮ್ಮ "ಕಾನೂನುಬದ್ಧ ಬೇಡಿಕೆಗಳಾದ" ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಬೇಕು, ಎಲ್ಲಾ ಉತ್ಪನ್ನಗಳಿಗೆ ಮತ್ತು ಎಲ್ಲಾ ರೈತರಿಗೆ ಎಂಎಸ್ಪಿಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಬೇಕು ಹಾಗೂ ಕೇಂದ್ರ ಅಜಯ್ ಮಿಶ್ರಾ ಅವರನ್ನು ವಜಾಗಳಿಸಿ, ಬಂಧಿಸಬೇಕು ಎಂದು ಅಕ್ಟೋಬರ್ 26ರಂದು ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ರೈತ ಸಂಘಗಳ ಜಂಟಿ ವೇದಿಕೆ ಎಸ್ಕೆಎಂ ಪ್ರಕಟಣೆಯಲ್ಲಿ ತಿಳಿಸಿದೆ.
ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ಕಳೆದ ವರ್ಷ ನವೆಂಬರ್ 26 ರಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಗಳಾದ ಸಿಂಘು, ಟಿಕ್ರಿ ಮತ್ತು ಗಾಜಿಪುರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ನ್ಯಾಯ ದೊರೆಯಬೇಕು ಎಂದರೆ ಕೇಂದ್ರ ಗೃಹ ಖಾತೆ ರಾಜ್ಯ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಮತ್ತು ತಕ್ಷಣ ಅವರನ್ನು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸಿದೆ.