The New Indian Express
ಲಖನೌ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರಪ್ರದೇಶದಲ್ಲಿ ಪಕ್ಷದ ಉಸ್ತುವಾರಿ ಹೊತ್ತುಕೊಂಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಬಾರಾಬಂಕಿಯಲ್ಲಿ ಪ್ರತಿಜ್ಞಾ ಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷವು 7 ವಾಗ್ದಾನಗಳನ್ನು ಈಡೇರಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಹಿಳಾ ಪೊಲೀಸರ ವಿರುದ್ಧ ಕ್ರಮ ಸಾಧ್ಯತೆ
ಬಾರಾಬಂಕಿಯಿಂದ ಶುರುವಾದ ಪ್ರತಿಜ್ಞಾ ಯಾತ್ರೆ ನವೆಂಬರ್1 ರಂದು ಬುಂದೇಲ್ ಖಂಡ್ ಪ್ರಾಂತ್ಯದಲ್ಲಿ ಕೊನೆಗೊಳ್ಳಲಿದೆ. ಯಾತ್ರೆಯು ಸಹಾರನ್ ಪುರ, ಮಥುರಾ, ವಾರಾಣಸಿ ಮತ್ತು ರಾಯ್ ಬರೇಲಿಯನ್ನು ಹಾದುಹೋಗಲಿದೆ.
ಇದನ್ನೂ ಓದಿ: ಕೋರ್ಟ್ ಆವರಣದಲ್ಲೇ ವಕೀಲರ ಹತ್ಯೆ: ಉತ್ತರ ಪ್ರದೇಶದಲ್ಲಿ ಯಾರೂ ಸುರಕ್ಷಿತವಲ್ಲ ಎಂದ ಪ್ರಿಯಾಂಕಾ ಗಾಂಧಿ
ಉತ್ತರಪ್ರದೇಶದ ಜನರಿಗೆ ಕಾಂಗ್ರೆಸ್ ನೀಡಿರುವ 7 ವಾಗ್ದಾನಗಳು ಹೀಗಿವೆ: ಶೇ.40ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್, ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್ ಮತ್ತು ಇ-ಸ್ಕೂಟರ್ ಗಳು, ರೈತರ ಸಾಲ ಸಂಪೂರ್ಣ ಮನ್ನಾ, ಗೋದಿ ಮತ್ತು ಬತ್ತ ಬೆಳೆಗೆ 2,500 ರೂ. ಕನಿಷ್ಟ ಬೆಲೆ(ಎಂ.ಎಸ್.ಪಿ) ನಿಗದಿ, ಸಾಂಕ್ರಾಮಿಕ ಸಮಯದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವವರಿಗೆ ಅರ್ಧ ಮೊತ್ತ ಮನ್ನಾ, ಸಾಂಕ್ರಾಮಿಕದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ 25,000 ರೂ. ಸಹಾಯಧನ, ೨೫ ಲಕ್ಷ ಮಂದಿಗೆ ಸರ್ಕಾರಿ ಉದ್ಯೋಗ.
ಇದನ್ನೂ ಓದಿ: ಹವಾಯಿ ಚಪ್ಪಲಿ ಧರಿಸಿರುವವರು ವಿಮಾನದಲ್ಲಿ ಪ್ರಯಾಣಿಸುವುದಿರಲಿ, ಜನ ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ!