ಭಾರತ-ಪಾಕ್ ಪಂದ್ಯ: ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ, ಬಿಹಾರದ ವಿದ್ಯಾರ್ಥಿಗಳ ನಡುವೆ ಘರ್ಷಣೆ

ಭಾರತ-ಪಾಕ್ ನಡುವಿನ ಟಿ20 ವಿಶ್ವಕಪ್ ಪಂದ್ಯದ ಬಳಿಕ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳು ಉತ್ತರ ಪ್ರದೇಶ, ಬಿಹಾರ ವಿದ್ಯಾರ್ಥಿಗಳೊಂದಿಗೆ ವಾಗ್ವಾದಕ್ಕೆ ಇಳಿದಿದ್ದು ಘರ್ಷಣೆ ಉಂಟಾಗಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ-ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ-ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್

ಪಂಜಾಬ್: ಭಾರತ-ಪಾಕ್ ನಡುವಿನ ಟಿ20 ವಿಶ್ವಕಪ್ ಪಂದ್ಯದ ಬಳಿಕ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳು ಉತ್ತರ ಪ್ರದೇಶ, ಬಿಹಾರ ವಿದ್ಯಾರ್ಥಿಗಳೊಂದಿಗೆ ವಾಗ್ವಾದಕ್ಕೆ ಇಳಿದಿದ್ದು ಘರ್ಷಣೆ ಉಂಟಾಗಿರುವ ಘಟನೆ ಪಂಜಾಬ್ ನ ಸಂಗ್ರೂರ್ ಜಿಲ್ಲೆಯಲ್ಲಿನ ಇಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ನಡೆದಿದೆ. 

ಪಂದ್ಯದ ಬಳಿಕ ಕೇಳಿಬಂದ ಕೆಲವು ಘೋಷಣೆಗಳ ಪರಿಣಾಮ ಈ ಘರ್ಷಣೆ ಉಂಟಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಭಾಯ್ ಗುರುದಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾಶ್ಮೀರ, ಉತ್ತರ ಪ್ರದೇಶ, ಬಿಹಾರದ ವಿದ್ಯಾರ್ಥಿಗಳು ಪಂದ್ಯವನ್ನು ಅವರ ಕೊಠಡಿಗಳಲ್ಲಿ ವೀಕ್ಷಿಸುತ್ತಿದ್ದರು. ಈ ವೇಳೆ ಪಾಕಿಸ್ತಾನ ಪಂದ್ಯ ಗೆದ್ದಾಗ

ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಕಾಶ್ಮೀರಿ ವಿದ್ಯಾರ್ಥಿಗಳು ತಮ್ಮ ಕೊಠಡಿಗೆ ಉತ್ತರ ಪ್ರದೇಶದ ಕೆಲವು ವಿದ್ಯಾರ್ಥಿಗಳು ನುಗ್ಗಿದ್ದರು ಎಂದು ಆರೋಪಿಸಿರುವ ವಿಡಿಯೋ ವೈರಲ್ ಆಗತೊಡಗಿದೆ.

"ನಾವು ಪಂದ್ಯ ವೀಕ್ಷಿಸುತ್ತಿದ್ದೆವು. ಈ ವೇಳೆ ಉತ್ತರ ಪ್ರದೇಶ ವಿದ್ಯಾರ್ಥಿಗಳು ನಮ್ಮ ಕೊಠಡಿಗೆ ನುಗ್ಗಿದ್ದರು" ಎಂದು ಕಾಶ್ಮೀರದ ವಿದ್ಯಾರ್ಥಿಗಳು ಆರೋಪಿಸಿದ್ದು ತಮ್ಮ ಕೊಠಡಿಯಲ್ಲಿ ಉಂಟಾಗಿರುವ ಹಾನಿಯನ್ನು ತೋರಿಸಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com