'2ನೇ ಡೋಸ್ ಕೋವಿಡ್ ಲಸಿಕೆ ತಪ್ಪಿಸಿಕೊಂಡ 11 ಕೋಟಿ ಮಂದಿ': ರಾಜ್ಯ ಆರೋಗ್ಯ ಸಚಿವರ ಸಭೆ ಕರೆದ ಕೇಂದ್ರ

11 ಕೋಟಿ ಜನರು ತಮ್ಮ ಎರಡನೇ ಡೋಸ್ ಕೋವಿಡ್ ಲಸಿಕೆ ತಪ್ಪಿಸಿಕೊಂಡಿದ್ದಾರೆ ಅಥವಾ ವಿಳಂಬ ಮಾಡುತ್ತಿದ್ದು, ಈ ಸಂಬಂಧ ಚರ್ಚಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡ್ವಿಯಾ ಅವರು ರಾಜ್ಯ ಆರೋಗ್ಯ ಸಚಿವರ ಸಭೆ ಕರೆದಿದ್ದಾರೆ.
ಕೋವಿಡ್ ಲಸಿಕಾ ಕಾರ್ಯಕ್ರಮ
ಕೋವಿಡ್ ಲಸಿಕಾ ಕಾರ್ಯಕ್ರಮ

ನವದೆಹಲಿ: 11 ಕೋಟಿ ಜನರು ತಮ್ಮ ಎರಡನೇ ಡೋಸ್ ಕೋವಿಡ್ ಲಸಿಕೆ ತಪ್ಪಿಸಿಕೊಂಡಿದ್ದಾರೆ ಅಥವಾ ವಿಳಂಬ ಮಾಡುತ್ತಿದ್ದು, ಈ ಸಂಬಂಧ ಚರ್ಚಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ರಾಜ್ಯ ಆರೋಗ್ಯ ಸಚಿವರ ಸಭೆ ಕರೆದಿದ್ದಾರೆ.

ದೇಶದ ವಯಸ್ಕ ಜನಸಂಖ್ಯೆಯ ಶೇ.76ಕ್ಕಿಂತ ಹೆಚ್ಚು ಜನರು ಈಗ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾರೆ. ಆದರೆ ಎರಡೂ ಡೋಸ್ ಲಸಿಕೆ ಪಡೆದ ಜನರ ಸಂಖ್ಯೆ ಶೆ.32ಕ್ಕಿಂತ ಸ್ವಲ್ಪ ಹೆಚ್ಚಾಗಿದೆ. 

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಇದುವರೆಗೆ 107 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸರಬರಾಜು ಮಾಡಿದ್ದು, 12.37 ಕೋಟಿಗೂ ಹೆಚ್ಚು ಡೋಸ್ ಇನ್ನೂ ರಾಜ್ಯಗಳಲ್ಲಿ ಲಭ್ಯವಿದೆ.

ದೇಶಾದ್ಯಂತ 11 ಕೋಟಿ ಮಂದಿ ನಿಗದಿತ ಅವಧಿ ಮುಗಿದರೂ ತಮ್ಮ ಎರಡನೇ ಡೋಸ್ ಲಸಿಕೆ ಪಡೆದಿಲ್ಲ. ಹೀಗಾಗಿ ಕೇಂದ್ರ ಆರೋಗ್ಯ ಸಚಿವರು ಬುಧವಾರ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದಿದ್ದು, ಲಸಿಕೆ ಫಲಾನುಭವಿಗಳಿಗೆ ಸಂಪೂರ್ಣ ಎರಡೂ ಡೋಸ್ ಖಚಿತಪಡಿಸಿಕೊಳ್ಳಲು ಇರುವ ಅಡೆತಡೆಗಳ ಬಗ್ಗೆ ಚರ್ಚಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com