ಆರ್ಯನ್ ಖಾನ್ ಡ್ರಗ್ಸ್ ಸೇವಿಸುವುದಲ್ಲದೆ ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ: ಹೈಕೋರ್ಟ್‌ಗೆ ಎನ್‌ಸಿಬಿ
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಜಾಮೀನಿಗೆ ವಿರೋಧ...
Published: 26th October 2021 03:51 PM | Last Updated: 26th October 2021 04:32 PM | A+A A-

ಆರ್ಯನ್ ಖಾನ್
ಮುಂಬೈ: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಜಾಮೀನಿಗೆ ವಿರೋಧ ವ್ಯಕ್ತಪಡಿಸಿರುವ ಎನ್ ಸಿಬಿ, ಆರ್ಯನ್ ಖಾನ್ ಕೇವಲ ಡ್ರಗ್ಸ್ ಸೇವಿಸುವುದಿಲ್ಲ. ಅವರು ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಂಗಳವಾರ ಆರೋಪಿಸಿದೆ.
ಆರ್ಯನ್ ಖಾನ್ ಮತ್ತು ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ ಎಂಬ ಮಹಿಳೆ ತನಿಖೆಯ ದಾರಿತಪ್ಪಿಸುವ ಪ್ರಯತ್ನದಲ್ಲಿ ಪ್ರಕರಣದ ಸಾಕ್ಷಿ ಮತ್ತು ಸಾಕ್ಷ್ಯಗಳನ್ನು ತಿರುಚುತ್ತಿದ್ದಾರೆ ಎಂದು ಎನ್ ಸಿಬಿ ಬಾಂಬೆ ಹೈಕೋರ್ಟ್ ಗೆ ತಿಳಿಸಿದೆ.
ಇದನ್ನು ಓದಿ: ಅನನ್ಯ ಪಾಂಡೆಯಿಂದ ಮೂರು ಬಾರಿ ಆರ್ಯನ್ ಖಾನ್ ಗೆ ಡ್ರಗ್ಸ್ ಪೂರೈಸಿರುವುದು ಚಾಟ್ ನಿಂದ ಬಹಿರಂಗ: ಎನ್ ಸಿಬಿ
ಮತ್ತೊಂದೆಡೆ, ಆರ್ಯನ್ ಖಾನ್ ಅವರ ವಕೀಲರು ಹೆಚ್ಚುವರಿ ಟಿಪ್ಪಣಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದು, ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಕೆಲವು ರಾಜಕೀಯ ವ್ಯಕ್ತಿಗಳ ನಡುವಿನ ಆರೋಪ, ಪ್ರತ್ಯಾರೋಪಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಆರ್ಯನ್ ಖಾನ್ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಜಾಮೀನು ಅರ್ಜಿಗೆ ಪ್ರತಿಕ್ರಿಯೆಯಾಗಿ ಎನ್‌ಸಿಬಿ ಮಂಗಳವಾರ ತನ್ನ ಅಫಿಡವಿಟ್ ಸಲ್ಲಿಸಿದೆ ಮತ್ತು ಪ್ರಕರಣದ ತನಿಖೆಯ ದಾರಿತಪ್ಪಿಸುವ ದುರುದ್ದೇಶದಿಂದ ತನಿಖೆಯನ್ನು ಹಾಳು ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಡ್ರಗ್ಸ್ ನಿಗ್ರಹ ಸಂಸ್ಥೆ ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.
ನ್ಯಾಯಮೂರ್ತಿ ಎನ್ ಡಬ್ಲ್ಯು ಸಾಂಬ್ರೆ ಅವರ ಏಕ ಸದಸ್ಯ ಪೀಠ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.