
ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದ ಸಬ್ ಮರೈನ್ ಪ್ರಾಜೆಕ್ಟ್ ಸಂಬಂಧಿಸಿದಂತೆ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇರೆ ಸಿಬಿಐ, ನೌಕಾದಳ ಕಮಾಂಡರ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಿದೆ.
ಇದನ್ನೂ ಓದಿ: ಹೈಕೋರ್ಟ್ ನ್ಯಾಯಾಧೀಶರು ಹಾಗೂ ನ್ಯಾಯಾಂಗ ವಿರುದ್ಧ ಅವಹೇಳಕಾರಿ ಹೇಳಿಕೆ: ಸಿಬಿಐನಿಂದ ಮತ್ತೂ 5 ಆರೋಪಿಗಳ ಬಂಧನ
ಇಬ್ಬರು ನಿವೃತ್ತ ನೌಕಾದಳ ಸಿಬ್ಬಂದಿ ಹಾಗೂ ಓರ್ವ ವ್ಯಕ್ತಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಸಿಬಿಐ ದೆಹಲಿ, ಮುಂಬೈ, ಹೈದರಾಬಾದ್, ವಿಶಾಖಪಟ್ಟಣಂ ಸೇರಿದಂತೆ ಇದುವರೆಗೂ 19 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.
ಇದನ್ನೂ ಓದಿ: ಫೋನ್ ಕದ್ದಾಲಿಕೆ, ಮಾಹಿತಿ ಸೋರಿಕೆ ಪ್ರಕರಣ: ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್‌ಗೆ ಮುಂಬೈ ಪೊಲೀಸ್ ಸಮನ್ಸ್!
ಶೋಧ ಕಾರ್ಯಾಚರಣೆ ವೇಳೆ ದಾಖಲೆಪತ್ರಗಳು, ಡಿಜಿಟಲ್ ಸಾಕ್ಷ್ಯಗಳು ಸಿಬಿಐ ಅಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. ಸಿಬಿಐ ತನಿಖೆಗೆ ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ನೌಕಾದಲ ತಿಳಿಸಿದೆ. ಅಲ್ಲದೆ ಆಂತರಿಕ ತನಿಖಾ ಸಮಿತಿಯನ್ನು ರಚನೆ ಮಾಡಲಾಗಿದ್ದು ರಕ್ಷಣಾ ಮಾಹಿತಿ ಸೋರಿಕೆಯಾದುದರ ಕುರಿತು ಪರಿಶೀಲನೆ ನಡೆಸಲಿದೆ.
ಇದನ್ನೂ ಓದಿ: ಲಖಿಂಪುರ್ ಖೇರಿ ಕೇಸ್, ಸಿಬಿಐಗೆ ವರ್ಗಾಯಿಸುವುದು ಪರಿಹಾರವಾಗದಿರಬಹುದು: ಸುಪ್ರೀಂ