ಶಿಸ್ತು ಅತ್ಯಂತ ಅಗತ್ಯ; ವೈಯಕ್ತಿಕ ಮಹತ್ವಕಾಂಕ್ಷೆ ಬದಿಗೊತ್ತಿ ಕಾಂಗ್ರೆಸ್ ಬಲಪಡಿಸಿ: ಜಿ-23 ಮುಖಂಡರಿಗೆ ಸೋನಿಯಾ ಸಂದೇಶ

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯವಿದೆ ಎಂದು ಮಂಗಳವಾರ ಪ್ರತಿಪಾದಿಸಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ವೈಯಕ್ತಿಕ ಮಹತ್ವಾಕಾಂಕ್ಷೆಗಳನ್ನು ಬದಿಗೊತ್ತಿ  ಪಕ್ಷವನ್ನು ಸಂಘಟಿಸಬೇಕಾಗಿದೆ ಎಂದು ಹೇಳಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

 ನವದೆಹಲಿ:  ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯವಿದೆ ಎಂದು ಮಂಗಳವಾರ ಪ್ರತಿಪಾದಿಸಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ವೈಯಕ್ತಿಕ ಮಹತ್ವಾಕಾಂಕ್ಷೆಗಳನ್ನು ಬದಿಗೊತ್ತಿ  ಪಕ್ಷವನ್ನು ಸಂಘಟಿಸಬೇಕಾಗಿದೆ ಎಂದು ಹೇಳಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಕಾರ್ಯತಂತ್ರ ರೂಪಿಸಲು  ಇಂದು ನಡೆದ ಪಕ್ಷದ ಉನ್ನತ ಮುಖಂಡರ ಸಭೆಯಲ್ಲಿ ಮಾತನಾಡಿದ ಸೋನಿಯಾ, ಕೇಂದ್ರ ಸರ್ಕಾರದ ಕೆಟ್ಟ ಆಡಳಿತದ ವಿರುದ್ಧ ಹೋರಾಟವನ್ನು ಪಕ್ಷ ದುಪ್ಪಟ್ಟುಗೊಳಿಸಬೇಕು ಎಂದರು. 

ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ರಾಹುಲ್ ಗಾಂಧಿ ಕೂಡಾ ಭಾಗವಹಿಸಿದ್ದರು. 

ರಾಜ್ಯ ಮುಖಂಡರಲ್ಲಿ ಸ್ಪಷ್ಟತೆ ಹಾಗೂ ಒಗ್ಗಟ್ಟಿನ ಕೊರತೆಯನ್ನು ಪ್ರಸ್ತಾಪಿಸಿದ ಸೋನಿಯಾ, ಶಿಸ್ತು ಮತ್ತು ಒಗ್ಗಟ್ಟು ಅತ್ಯಂತ ಅಗತ್ಯವಿದೆ.  ಪ್ರತಿಯೊಬ್ಬರು ಪಕ್ಷವನ್ನು ಸಂಘಟಿಸಬೇಕಾಗಿದೆ. ಇದಕ್ಕಾಗಿ ವೈಯ್ತಕಿಕ್ತ ಮಹತ್ವಕಾಂಕ್ಷೆಗಳನ್ನು ಬದಿಗೊತ್ತಬೇಕಾಗಿದೆ. ಇದರಲ್ಲಿ ವೈಯಕ್ತಿಕ ಮತ್ತು ಸಾಮೂಹಿಕ ಯಶಸ್ಸು ಅಡಗಿದೆ ಎಂದು ಹೇಳಿದರು. 

ಪಕ್ಷದ ಕಾರ್ಯಕರ್ತರಿಗೆ ತರಬೇತಿ ಕಾರ್ಯಕ್ರಮದ ಬಗ್ಗೆ ಪ್ರತಿಪಾದಿಸಿದ ಸೋನಿಯಾ, ಇದನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು, ಹೋರಾಟ ನಮ್ಮ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಪಕ್ಷದ ತತ್ವ ಸಿದ್ದಾಂತವನ್ನು ಅವಲಂಬಿಸಿರಬೇಕು, ತಪ್ಪು ಪ್ರಚಾರದ ವಿರುದ್ಧ ಪ್ರತಿ ದಾಳಿ ನಡೆಸಬೇಕು, ಬಿಜೆಪಿ, ಆರ್ ಎಸ್ ಎಸ್ ತತ್ವ ಸಿದ್ದಾಂತದ ಅಭಿಯಾನ ವಿರುದ್ಧ ಹೋರಾಟ ತೀವ್ರಗೊಳಿಸಬೇಕು, ಅವರ ಸುಳ್ಳುಗಳನ್ನು ಜನರ ಮುಂದೆ ಇಟ್ಟರೆ ಚುನಾವಣೆಯಲ್ಲಿ ಗೆಲ್ಲಬಹುದು ಎಂದರು. 

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸೋನಿಯಾ ಗಾಂಧಿ, ಈ ಸರ್ಕಾರದ ಕೆಟ್ಟ ಆಡಳಿತದಿಂದ ಸಂತ್ರಸ್ತರಾದ ನಮ್ಮ ರೈತರು, ಕೃಷಿ ಕಾರ್ಮಿಕರು, ಯುವ ಜನಾಂಗ, ಸಣ್ಣ ಉದ್ಯಮಗಳು, ನಮ್ಮ ಸಹೋದರರು ಹಾಗೂ ಸಹೋದರಿಯರ  ಪರವಾಗಿ ಹೋರಾಟವನ್ನು ದುಪ್ಪಟ್ಟುಗೊಳಿಸಬೇಕಾಗಿದೆ ಎಂದು ಕರೆ ನೀಡಿದರು.
 
ಮುಂದಿನ ವರ್ಷ ಆರಂಭದಲ್ಲಿ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com