ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್ಸು: 9 ಮಂದಿ ಸಾವು, ಹಲವರಿಗೆ ಗಾಯ, ಪ್ರಧಾನಿ ಪರಿಹಾರ ಪ್ರಕಟ

ತತ್ರಿಯಿಂದ ದೋಡಾಕ್ಕೆ ಪ್ರಯಾಣಿಸುತ್ತಿದ್ದ ಮಿನಿ ಬಸ್ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಆಳವಾದ ಕಂದಕಕ್ಕೆ ಉರುಳಿ ಬಿದ್ದು 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.
ಕಂದಕಕ್ಕೆ ಉರುಳಿಬಿದ್ದ ಬಸ್ಸು
ಕಂದಕಕ್ಕೆ ಉರುಳಿಬಿದ್ದ ಬಸ್ಸು

ದೋಡಾ: ತತ್ರಿಯಿಂದ ದೋಡಾಕ್ಕೆ ಪ್ರಯಾಣಿಸುತ್ತಿದ್ದ ಮಿನಿ ಬಸ್ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಆಳವಾದ ಕಂದಕಕ್ಕೆ ಉರುಳಿ ಬಿದ್ದು 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.

ತತ್ರಿಯಿಂದ ಬಸ್ಸು ದೋಡಾ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಸ್ಸು ತತ್ರಿ-ದೊಡಾ ರಸ್ತೆಯಲ್ಲಿ ಸೈ ಗ್ವಾರಿಯ ಚೆನಬ್ ನದಿಯ ಹತ್ತಿರ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ.

ದೊಡಾದ ಹೆಚ್ಚುವರಿ ಎಸ್ಪಿ ನೀಡಿರುವ ಮಾಹಿತಿ ಪ್ರಕಾರ ಸ್ಥಳದಲ್ಲಿ ಇನ್ನೂ ರಕ್ಷಣಾ ಕಾರ್ಯ ಮುಂದುವರಿದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್, 9 ಮಂದಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈಗಷ್ಟೇ ದೊಡಾ ಜಿಲ್ಲಾಧಿಕಾರಿ ವಿಕಾಸ್ ಶರ್ಮ ಅವರ ಜೊತೆ ಮಾತನಾಡಿದ್ದು ಗಾಯಗೊಂಡವರನ್ನು ದೊಡಾದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಸಿಗಬೇಕಿದೆ ಎಂದರು.

ಪ್ರಧಾನಿ ಕಂಬನಿ, ಪರಿಹಾರ ಘೋಷಣೆ: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳನ್ನು ಮೃತರ ಕುಟುಂಬಸ್ಥರಿಗೆ ಘೋಷಿಸಿದ್ದಾರೆ. ಗಾಯಗೊಂಡವರ ಚಿಕಿತ್ಸೆಗೆ ತಲಾ 50 ಸಾವಿರ ರೂಪಾಯಿ ಪ್ರಕಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com