ಟಿ20 ವಿಶ್ವಕಪ್: ಭಾರತ ವಿರುದ್ಧ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಿದ ಕಾಶ್ಮೀರದ ಮೂವರು ವಿದ್ಯಾರ್ಥಿಗಳು ಆಗ್ರಾದಲ್ಲಿ ಬಂಧನ
ಕಳೆದ 24ರಂದು ನಡೆದ ಟಿ20 ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಕಾಶ್ಮೀರದ ಮೂವರು ವಿದ್ಯಾರ್ಥಿಗಳನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿಗಳು ಪಾಕಿಸ್ತಾನ ಸೋಷಿಯಲ್ ಮೀಡಿಯಾಗಳಲ್ಲಿ ಭಾರತ ವಿರುದ್ಧ ಸಂದೇಶಗಳನ್ನು ಹಾಕುತ್ತಿದ್ದರು ಎಂದು ಸಹ ಪೊಲೀಸರು ಹೇಳಿದ್ದಾರೆ.
Published: 28th October 2021 12:18 PM | Last Updated: 28th October 2021 12:18 PM | A+A A-

ಸಾಂದರ್ಭಿಕ ಚಿತ್ರ
ಆಗ್ರಾ: ಕಳೆದ 24ರಂದು ನಡೆದ ಟಿ20 ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಕಾಶ್ಮೀರದ ಮೂವರು ವಿದ್ಯಾರ್ಥಿಗಳನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿಗಳು ಪಾಕಿಸ್ತಾನ ಸೋಷಿಯಲ್ ಮೀಡಿಯಾಗಳಲ್ಲಿ ಭಾರತ ವಿರುದ್ಧ ಸಂದೇಶಗಳನ್ನು ಹಾಕುತ್ತಿದ್ದರು ಎಂದು ಸಹ ಪೊಲೀಸರು ಹೇಳಿದ್ದಾರೆ.
ಬಂಧಿತ ಮೂವರು ಕಾಶ್ಮೀರ ವಿದ್ಯಾರ್ಥಿಗಳನ್ನು ಇನಾಯತ್ ಅಲ್ತಫ್ ಶೈಖ್, ಶೌಕತ್ ಅಹ್ಮದ್ ಗನಿ ಮತ್ತು ಅರ್ಶಿದ್ ಯೂಸಫ್ ಎಂದು ಗುರುತಿಸಲಾಗಿದೆ ಎಂದು ಆಗ್ರಾ ಎಸ್ಪಿ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಈ ಮೂವರು ವಿದ್ಯಾರ್ಥಿಗಳು ಬಿಚ್ಪುರಿಯ ಆರ್ ಬಿಎಸ್ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿದ್ದಾರೆ.
ವಿದ್ಯಾರ್ಥಿಗಳನ್ನು ಸೆಕ್ಷನ್ 153 (ಎ) (ಅಸಮಾನತೆಯನ್ನು ಉತ್ತೇಜಿಸುವುದು), ಮತ್ತು 505 (ವದಂತಿ ಅಥವಾ ಆತಂಕಕಾರಿ ಸುದ್ದಿಗಳನ್ನು ಒಳಗೊಂಡ ಹೇಳಿಕೆ ಅಥವಾ ವರದಿಯನ್ನು ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದು) ಅಡಿಯಲ್ಲಿ ಬಂಧಿಸಲಾಗಿದೆ.ಹೆಚ್ಚಿನ ವಿಚಾರಣೆ ನಡೆಯುತ್ತಿದೆ.