ಮಹಾ ಸಚಿವ ನವಾಬ್ ಮಲಿಕ್ ವಿರುದ್ಧ ಪೊಲೀಸರಿಗೆ ಸಮೀರ್ ವಾಂಖೆಡೆ ಸಹೋದರಿ ದೂರು

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ)ದ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ಸಹೋದರಿ ಯಾಸ್ಮೀನ್ ವಾಂಖೆಡೆ ಅವರು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಸಮೀರ್ ವಾಂಖೆಡೆ, ನವಾಬ್ ಮಲಿಕ್
ಸಮೀರ್ ವಾಂಖೆಡೆ, ನವಾಬ್ ಮಲಿಕ್

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ)ದ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ಸಹೋದರಿ ಯಾಸ್ಮೀನ್ ವಾಂಖೆಡೆ ಅವರು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಸಚಿವ ನವಾಬ್ ಮಲಿಕ್ ಅವರು ತಮ್ಮ ಕುಟುಂಬದ ಗೌರವಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಯಾಸ್ಮೀನ್ ವಾಂಖೆಡೆ ದೂರು ನೀಡಿರುವುದಾಗಿ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಇಲ್ಲಿನ ಓಶಿವಾರಾ ಪೊಲೀಸರಿಗೆ ಸಲ್ಲಿಸಿದ ಎರಡು ಪುಟಗಳ ದೂರಿನಲ್ಲಿ, ಮಲಿಕ್ ಅವರು ತನ್ನ ಕುಟುಂಬವನ್ನು ಸಾಮಾಜಿಕ ಮಾಧ್ಯಮದಲ್ಲಿ ಗುರಿಯಾಗಿಸಿಕೊಂಡಿದ್ದಾರೆ ಮತ್ತು ಕುಟುಂಬದ ಮಾಲ್ಡೀವ್ಸ್‌ ಪ್ರವಾಸವನ್ನು "ವಸೂಲಿ(ಸುಲಿಗೆ) ಪ್ರವಾಸ" ಎಂದು ಕರೆದಿದ್ದಾರೆ. 

ಮಲಿಕ್ ತನ್ನ ಮತ್ತು ತನ್ನ ಕುಟುಂಬ ಸದಸ್ಯರ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತಿದ್ದಾರೆ ಎಂದು ಯಾಸ್ಮೀನ್ ವಾಂಖೆಡೆ ಅವರು ಆರೋಪಿಸಿದ್ದಾರೆ.

ನನ್ನನ್ನು ಆನ್‌ಲೈನ್‌ನಲ್ಲಿ ಹಿಂಬಾಲಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಾದ ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ಗಳಲ್ಲಿ ಇತ್ತೀಚೆಗೆ ನಾನು ಪೋಸ್ಟ್‌ ಮಾಡಿದ್ದ ನನ್ನ ವೈಯಕ್ತಿಕ ಫೋಟೋಗಳನ್ನು ಮಾಧ್ಯಮದವರಿಗೆ ಅಕ್ರಮವಾಗಿ ನೀಡುತ್ತಿದ್ದಾರೆ ಎಂದು ಯಾಸ್ಮೀನ್ ದೂರಿದ್ದಾರೆ.

ಕಳೆದ ವಾರ ಯಾಸ್ಮೀನ್ ವಾಂಖೆಡೆಯವರಿಂದ ದೂರು ಸ್ವೀಕರಿಸಿದ್ದೇವೆ. ಆದರೆ, ಇಲ್ಲಿವರೆಗೂ ಯಾರ ವಿರುದ್ಧವೂ ಪ್ರಕರಣ ದಾಖಲಾಗಿಲ್ಲ ಎಂದು ಒಶಿವಾರಾ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸಿದ ಹೈ-ಪ್ರೊಫೈಲ್ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಸುಲಿಗೆ ಆರೋಪ ಎದುರಿಸುತ್ತಿರುವ ಸಮೀರ್ ವಾಂಖೆಡೆ ವಿರುದ್ಧ ಇಲಾಖಾ ವಿಜಿಲೆನ್ಸ್ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com