ಕ್ರೂಸ್ ಡ್ರಗ್ಸ್ ಪ್ರಕರಣ: ಎನ್‌ಡಿಪಿಎಸ್ ಕೋರ್ಟ್ ನಿಂದ ಇತರೆ ಏಳು ಆರೋಪಿಗಳಿಗೆ ಜಾಮೀನು

ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್​ ಖಾನ್​...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್​ ಖಾನ್​ ಹಾಗೂ ಇತರ ಇಬ್ಬರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ ಶನಿವಾರ ವಿಶೇಷ ಕೋರ್ಟ್ ಪ್ರಕರಣದ ಇತರೆ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಇತರೆ ಆರೋಪಿಗಳಾದ ಮಾದಕ ವ್ಯಸನಿ ಆಚಿತ್ ಕುಮಾರ್ ಮತ್ತು ಇತರ ಆರು ಮಂದಿಗೆ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿ ವಿ ಪಾಟೀಲ್ ಅವರು ಜಾಮೀನು ನೀಡಿದ್ದಾರೆ.  ಇದರೊಂದಿಗೆ ಬಂಧಿತ 20 ಆರೋಪಿಗಳ ಪೈಕಿ 12 ಮಂದಿ ಜಾಮೀನು ಪಡೆದಿದ್ದಾರೆ.

ಇದಕ್ಕೂ ಮುನ್ನ ಎನ್‌ಡಿಪಿಎಸ್ ನ್ಯಾಯಾಲಯ ಆರ್ಯನ್ ಖಾನ್‌ಗೆ ಜಾಮೀನು ನಿರಾಕರಿಸಿತ್ತು. ಆದಾಗ್ಯೂ, ಬಾಂಬೆ ಹೈಕೋರ್ಟ್ ಗುರುವಾರ ಅವರಿಗೆ ಮತ್ತು ಇತರ ಇಬ್ಬರು ಸಹ ಆರೋಪಿಗಳಾದ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚೆಂಟ್ ಹೇಳಿಕೆಗಳ ಆಧಾರದ ಮೇಲೆ ಆಚಿತ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಹೇಳಿಕೊಂಡಿದೆ. ಆಚಿತ್ ಕುಮಾರ್ ಅವರು ಆರ್ಯನ್ ಖಾನ್ ಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಇತರ ಆರೋಪಿಗಳಾದ ನೂಪುರ್ ಸತಿಜಾ, ಗೋಮಿತ್ ಚೋಪ್ರಾ, ಗೋಪಾಲ್ ಜಿ ಆನಂದ್, ಸಮೀರ್ ಸೆಹಗಲ್, ಮಾನವ್ ಸಿಂಘಾಲ್ ಮತ್ತು ಭಾಸ್ಕರ್ ಅರೋರಾ ಅವರಿಗೆ ವಿಶೇಷ ಕೋರ್ಟ್ ಇಂದು ಜಾಮೀನು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com