ಕಾಂಗ್ರೆಸ್ ನಿರ್ಮಿಸಿದ ರೈಲ್ವೆ, ವಿಮಾನ ನಿಲ್ದಾಣ, ರಸ್ತೆಗಳನ್ನು ಬಿಜೆಪಿ ಮಾರುತ್ತಿದೆ- ಪ್ರಿಯಾಂಕಾ ಗಾಂಧಿ

 ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್​​ ನಿರ್ಮಿಸಿರುವುದನ್ನು ಬಿಜೆಪಿ ಮಾರಾಟ ಮಾಡುತ್ತಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ

ಗೋರಖ್ ಪುರ: ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್​​ ನಿರ್ಮಿಸಿರುವುದನ್ನು ಬಿಜೆಪಿ ಮಾರಾಟ ಮಾಡುತ್ತಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ರೈಲ್ವೆ, ವಿಮಾನ ನಿಲ್ದಾಣ ಮತ್ತು ರಸ್ತೆಗಳನ್ನು ನಿರ್ಮಿಸಿತ್ತು. ಆದ್ರೆ ಬಿಜೆಪಿ ಅವುಗಳನ್ನು ಮಾರಾಟ ಮಾಡುತ್ತಿದೆ. 70 ವರ್ಷಗಳಲ್ಲಿ ನಾವು ಏನು ಮಾಡಿದ್ದೇವೆ ಎಂದು ಅವರು ಕೇಳುತ್ತಾರೆ. ಅವರು ಕೇವಲ 7 ವರ್ಷಗಳಲ್ಲಿ 70 ವರ್ಷಗಳ ಪ್ರಯತ್ನವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು,  ರಾಜ್ಯದಲ್ಲಿ ನಿರುದ್ಯೋಗ ಪ್ರಮುಖ ಸಮಸ್ಯೆಯಾಗಿದೆ. ಯುಪಿಯಲ್ಲಿ 5 ಕೋಟಿ ನಿರುದ್ಯೋಗಿ ಯುವಕರಿದ್ದಾರೆ. ನಿರುದ್ಯೋಗದಿಂದ ಪ್ರತಿದಿನ ಮೂವರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಎಲ್ಲಾ ಜಾತಿಗಳು ಮತ್ತು ವರ್ಗಗಳ ಜನರನ್ನು ಶೋಷಣೆ ಮಾಡುತ್ತಿದೆ. ದಲಿತರು, ನೇಕಾರರು, ಒಬಿಸಿಗಳು, ಬಡವರು, ಅಲ್ಪಸಂಖ್ಯಾತರು ಮತ್ತು ಬ್ರಾಹ್ಮಣರು ಶೋಷಣೆಗೆ ಒಳಗಾಗಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಗುರು ಗೋರಖನಾಥರ ಬೋಧನೆಗೆ ವಿರುದ್ಧವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಈ ಸರ್ಕಾರ ಪ್ರತಿನಿತ್ಯ ಜನರ ಮೇಲೆ ಹಲ್ಲೆ ನಡೆಸುತ್ತಿದೆ ಎಂದು ಅವರು ಆರೋಪಿಸಿದರು. 

ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷ ಆರೋಪಿಸುತ್ತಿರುವಂತೆ ಬಿಜೆಪಿಯೊಂದಿಗೆ ಕಾಂಗ್ರೆಸ್ ಯಾವುದೇ ರೀತಿಯ ಸಂಬಂಧವನ್ನು ಹೊಂದುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com