ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುಣಮುಖ, ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ತೀವ್ರ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಣಮುಖರಾಗಿದ್ದು, ಆಸ್ರತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ನವದೆಹಲಿ: ತೀವ್ರ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಣಮುಖರಾಗಿದ್ದು, ಆಸ್ರತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಈ ತಿಂಗಳ ಆರಂಭದಲ್ಲಿ ಅನಾರೋಗ್ಯದಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್  ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಕ್ಟೋಬರ್ 13 ರಂದು ಸಂಜೆ 6.15 ಕ್ಕೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ಗೆ ದಾಖಲಿಸಲಾಗಿತ್ತು. 

ಕೊರೋನವೈರಸ್ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದ ಸಿಂಗ್ ಅವರನ್ನು ಏಪ್ರಿಲ್‌ನಲ್ಲಿ ಏಮ್ಸ್‌ಗೆ ದಾಖಲಿಸಲಾಗಿತ್ತು. ಒಂದು ತಿಂಗಳ ನಂತರ, ಅವರು ಅಸೌಖ್ಯದಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ ಸುಸ್ತು ಸೇರಿದಂತೆ ನಿಶ್ಯಕ್ತಿ ವಿಚಾರವಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ಮನೆಯಲ್ಲಿ ಡಾ.ಸಿಂಗ್ ಅವರಿಗೆ ನುರಿತ ವೈದ್ಯರೊಬ್ಬರು ವೈದ್ಯಕೀಯ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com