ಕೇಂದ್ರ ಸರ್ಕಾರಕ್ಕೆ ಜಿಡಿಪಿ ಹೆಚ್ಚಳ ಎಂದರೆ ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ: ರಾಹುಲ್ ಗಾಂಧಿ

ಎಲ್ ಪಿಜಿ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಳೆದ ಏಳು ವರ್ಷಗಳಲ್ಲಿ ಈ ವಸ್ತುಗಳ ಬೆಲೆ ಏರಿಕೆಯಿಂದ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಎಲ್ ಪಿಜಿ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಳೆದ ಏಳು ವರ್ಷಗಳಲ್ಲಿ ಈ ವಸ್ತುಗಳ ಬೆಲೆ ಏರಿಕೆಯಿಂದ 23 ಲಕ್ಷ ಕೋಟಿ ರೂಪಾಯಿ ಗಳಿಸಲಾಗಿದೆ ಎಂದು ಬುಧವಾರ ಹೇಳಿದ್ದಾರೆ.

ರೈತರು, ಸಂಬಳದ ವರ್ಗ ಮತ್ತು ಕಾರ್ಮಿಕರು ಡಿಮಾನಿಟೈಸ್ ಆಗುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿಯ ಕೆಲವು ಕೈಗಾರಿಕೋದ್ಯಮಿ ಸ್ನೇಹಿತರು ಹಣಗಳಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಅವರು ಆರೋಪಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಜಿಡಿಪಿಯ ಹೊಸ ಪರಿಕಲ್ಪನೆಯನ್ನು ತಿಳಿಸಿದ್ದಾರೆ. ಜಿಡಿಪಿ ಹೆಚ್ಚಳ ಎಂದರೆ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಎಂದರ್ಥ.
 
ಕಳೆದ ಏಳು ವರ್ಷಗಳಲ್ಲಿ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯಿಂದ ಸರ್ಕಾರ 23 ಲಕ್ಷ ಕೋಟಿ ರೂಪಾಯಿ ಗಳಿಸಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರೋಪಿಸಿದ್ದಾರೆ.

ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಯಿಂದ ಬಂದ ಈ ಹಣ ಎಲ್ಲಿಗೆ ಹೋಗುತ್ತಿದೆ ಎಂದು ದೇಶದ ಜನರು ಸರ್ಕಾರವನ್ನು ಕೇಳಬೇಕು. "ಒಂದೆಡೆ ನೋಟು ರದ್ದತಿ ಮತ್ತೊಂದೆಡೆ ಹಣಗಳಿಕೆ. ಯಾರ ನೋಟು ರದ್ದತಿ ನಡೆಯುತ್ತಿದೆ -ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಮತ್ತು ಅನೌಪಚಾರಿಕ ವಲಯ, ಎಂಎಸ್‌ಎಂಇಗಳು, ಗುತ್ತಿಗೆ ಕಾರ್ಮಿಕರು, ಸಂಬಳದ ವರ್ಗ ಮತ್ತು ಪ್ರಾಮಾಣಿಕ ಕೈಗಾರಿಕೋದ್ಯಮಿಗಳ ನೋಟು ರದ್ದಾಗುತ್ತಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ನಾಲ್ಕೈದು ಸ್ನೇಹಿತರು ಮಾತ್ರ ಹಣ ಗಳಿಸುತ್ತಿದ್ದಾರೆ. ಬಡವರು ಮತ್ತು ದುರ್ಬಲರಿಂದ ಪ್ರಧಾನಿಯ ಸ್ನೇಹಿತರಿಗೆ ಸಂಪತ್ತಿನ ವರ್ಗಾವಣೆ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ವಾಗ್ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com