ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 64.65 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 64.65 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಉಚಿತವಾಗಿ ಮತ್ತು ನೇರ ರಾಜ್ಯ ಖರೀದಿ ವರ್ಗದಲ್ಲಿ ನೀಡಲಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 64.65 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಉಚಿತವಾಗಿ ಮತ್ತು ನೇರ ರಾಜ್ಯ ಖರೀದಿ ವರ್ಗದಲ್ಲಿ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಬಳಕೆಯಾಗದ 4,78,94,030 ಡೋಸ್ ಲಸಿಕೆ ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಲಭ್ಯವಿವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕೇಂದ್ರ ಸರ್ಕಾರವು ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಕೋವಿಡ್ -19 ಲಸಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಲಭ್ಯತೆಯನ್ನು ಖಾತರಿಪಡಿಸುವ ಮೂಲಕ ಲಸಿಕೆ ಹಾಕುವಿಕೆಯನ್ನು ಹೆಚ್ಚಿಸಲಾಗಿದೆ ಮತ್ತು ಅವರಿಂದ ಉತ್ತಮ ಯೋಜನೆಯನ್ನು ಸಕ್ರಿಯಗೊಳಿಸಲು ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ವ್ಯವಸ್ಥಿತಗೊಳಿಸಲಾಗುತ್ತಿದೆ ಎಂದು ಕೇಂದ್ರ ಹೇಳಿದೆ.

ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಬೆಂಬಲಿಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com