ಬಂಗಾಳ ಚುನಾವಣೋತ್ತರ ಹಿಂಸಾಚಾರ: ಎಸ್ಐಟಿಗೆ ಸಹಾಯ ಮಾಡಲು 10 ಐಪಿಎಸ್ ಅಧಿಕಾರಿಗಳ ನೇಮಕ
ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಕಲ್ಕತ್ತಾ ಹೈಕೋರ್ಟ್ ರಚಿಸಿದ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಸಹಾಯ ಮಾಡಲು ಪಶ್ಚಿಮ ಬಂಗಾಳ ಸರ್ಕಾರ ಹತ್ತು ಐಪಿಎಸ್ ಅಧಿಕಾರಿಗಳನ್ನು ನೇಮಿಸಿದೆ..
Published: 02nd September 2021 04:20 PM | Last Updated: 02nd September 2021 05:42 PM | A+A A-

ಸಾಂದರ್ಭಿಕ ಚಿತ್ರ
ಕೋಲ್ಕತ್ತಾ: ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಕಲ್ಕತ್ತಾ ಹೈಕೋರ್ಟ್ ರಚಿಸಿದ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಸಹಾಯ ಮಾಡಲು ಪಶ್ಚಿಮ ಬಂಗಾಳ ಸರ್ಕಾರ ಹತ್ತು ಐಪಿಎಸ್ ಅಧಿಕಾರಿಗಳನ್ನು ನೇಮಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಅಧಿಕಾರಿಗಳನ್ನು ರಾಜ್ಯದ ಉತ್ತರ, ಪಶ್ಚಿಮ ಮತ್ತು ದಕ್ಷಿಣ ವಲಯಗಳಿಗೆ ಹಾಗೂ ಕೋಲ್ಕತಾ ಪೊಲೀಸ್ ಪ್ರದೇಶಗಳಿಗೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.
"ಐಪಿಎಸ್ ಅಧಿಕಾರಿಗಳ ಸೇವೆಯನ್ನು ಅವರ ಸಾಮಾನ್ಯ ಕರ್ತವ್ಯಗಳ ಜೊತೆಗೆ ಗೌರವಾನ್ವಿತ ಹೈಕೋರ್ಟ್ ರಚಿಸಿದ ಎಸ್ಐಟಿಗೆ ಸಹಾಯ ಮಾಡಲು ನಿಯೋಜಿಸಲಾಗಿದೆ" ಎಂದು ರಾಜ್ಯ ಗೃಹ ಇಲಾಖೆಯು ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ಆಗಸ್ಟ್ 19 ರಂದು ಕಲ್ಕತ್ತಾ ಹೈಕೋರ್ಟ್‌ನ ಐವರು ನ್ಯಾಯಾಧೀಶರ ಪೀಠ, ಚುನಾವಣೆಯ ನಂತರದ ಹಿಂಸಾಚಾರದ ಘಟನೆಗಳ ಬಗ್ಗೆ ತನಿಖೆ ನಡೆಸಲು ಐಪಿಎಸ್ ಅಧಿಕಾರಿಗಳಾದ ಸೌಮೆನ್ ಮಿತ್ರಾ, ಸುಮನ್ ಬಾಲಾ ಸಾಹೂ ಮತ್ತು ರಣಬೀರ್ ಕುಮಾರ್ ಅವರನ್ನು ಒಳಗೊಂಡ ವಿಶೇಷ ತನಿಖಾ ತಂಡ ರಚನೆ ಮಾಡಿತ್ತು.