ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

'ಗೋವು ರಾಷ್ಟ್ರೀಯ ಪ್ರಾಣಿಯಾದರೆ ಸಹೋದರತ್ವ ಹೆಚ್ಚುತ್ತದೆ': ಹೈಕೋರ್ಟ್ ಅಭಿಪ್ರಾಯ ಸ್ವಾಗತಿಸಿದ ಮುಸ್ಲಿಮರು

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯವನ್ನು ಸ್ವಾಗತಿಸಿದ ಮುಸ್ಲಿಂ ಧರ್ಮಗುರುಗಳು, ಇಂತಹ ಕ್ರಮವು ಸಮಾಜದ ವಿವಿಧ ವರ್ಗಗಳ ನಡುವೆ ಸಹೋದರತ್ವ ಹೆಚ್ಚುತ್ತದೆ...

ಲಖನೌ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯವನ್ನು ಸ್ವಾಗತಿಸಿದ ಮುಸ್ಲಿಂ ಧರ್ಮಗುರುಗಳು, ಇಂತಹ ಕ್ರಮವು ಸಮಾಜದ ವಿವಿಧ ವರ್ಗಗಳ ನಡುವೆ ಸಹೋದರತ್ವ ಹೆಚ್ಚುತ್ತದೆ ಮತ್ತು ಏಕತೆಯನ್ನು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.

ಹೈಕೋರ್ಟ್ ಅಭಿಪ್ರಾಯ ಸ್ವೀಕರಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯರು, ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾ ಅಧ್ಯಕ್ಷರು ಮತ್ತು ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ ಅವರು, ಹೈಕೋರ್ಟ್ ಅಭಿಪ್ರಾಯ ಜಾರಿಗೆ ತರಬೇಕು ಎಂದು ಹೇಳಿದ್ದಾರೆ.

"ನಾನು ಹೈಕೋರ್ಟ್ ಅಭಿಪ್ರಾಯವನ್ನು ಸ್ವಾಗತಿಸುತ್ತೇನೆ. ನಾವು ಈ ದೇಶದಲ್ಲಿ ಅನೇಕ ವರ್ಷಗಳಿಂದ ಸೌಹಾರ್ದತೆ ಮತ್ತು ಸಹೋದರತ್ವದಿಂದ ಬದುಕುತ್ತಿದ್ದೇವೆ. ಮೊಘಲ್ ದೊರೆ ಬಾಬರ್ ಕೂಡ ತನ್ನ ಉತ್ತರಾಧಿಕಾರಿ ಮತ್ತು ಮಗ ಹುಮಾಯೂನ್ ಅವರನ್ನು ಹಿಂದೂ ಭಾವನೆಗಳನ್ನು ಗೌರವಿಸುವಂತೆ ಮತ್ತು ಗೋಹತ್ಯೆಯನ್ನು ನಿಷೇಧಿಸುವಂತೆ ಹೇಳಿದ್ದರು”ಎಂದು ಮೌಲಾನ ತಿಳಿಸಿದ್ದಾರೆ.

ಅದೇ ರೀತಿ, ಆಲ್ ಇಂಡಿಯಾ ಶಿಯಾ ವೈಯಕ್ತಿಕ ಕಾನೂನು ಮಂಡಳಿಯ ಪ್ರಧಾನ ಕಾರ್ಯದರ್ಶಿ ಶಿಯಾ ಧರ್ಮಗುರು ಮೌಲಾನಾ ಯಾಸೂಬ್ ಅಬ್ಬಾಸ್ ಕೂಡ ಈ ಸಲಹೆಯನ್ನು ಬೆಂಬಲಿಸಿದ್ದು, "ಯಾವುದೇ ಪ್ರಾಣಿಯು ನಂಬಿಕೆಯೊಂದಿಗೆ ಸಂಬಂಧ ಹೊಂದಿದ್ದರೆ, ಅವರನ್ನು ನೋಯಿಸಬಾರದು ಎಂದು ನಮಗೆ ಈಗಾಗಲೇ ದೃಢವಾದ ನಂಬಿಕೆ ಇದೆ. ಗೋಹತ್ಯೆಯನ್ನು ನಿಷೇಧಿಸಲಾಗಿದೆ. ಇದು ಇಸ್ಲಾಂ ಮತ್ತು ಭಾರತೀಯ ಸಂಸ್ಕೃತಿಯ ನಿಜವಾದ ಸಂದೇಶವಾಗಿದೆ ಎಂದಿದ್ದಾರೆ.

ಹೈಕೋರ್ಟ್ ಸಲಹೆಯನ್ನು ಶ್ಲಾಘಿಸಿದ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷ ವಸೀಮ್ ರಿಜ್ವಿ, ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವುದು ರಾಷ್ಟ್ರಕ್ಕೆ ಗೌರವ ಎಂದಿದ್ದಾರೆ. 

ಗೋವನ್ನು ಕದ್ದು, ಕೊಂದ ಆರೋಪದ ಮೇರೆಗೆ ಬಂಧಿತನಾಗಿದ್ದ ಸಾಂಬಲ್‌ ಜಿಲ್ಲೆಯ ಜಾವೇದ್‌ ನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, 'ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಹಾಗೂ ಗೋ ಹತ್ಯೆ ಮಾಡುವವರನ್ನು ಶಿಕ್ಷಿಸುವ ನಿಟ್ಟಿನಲ್ಲಿ ಸಂಸತ್ತು ಕಾನೂನು ರೂಪಿಸಬೇಕು ಎಂದು ಹೇಳಿತ್ತು.

Related Stories

No stories found.

Advertisement

X
Kannada Prabha
www.kannadaprabha.com