ದೇಶದಲ್ಲಿ 67.65 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ

ದೇಶದಲ್ಲಿ ಒಟ್ಟಾರೇ ನೀಡಲಾಗಿರುವ ಕೋವಿಡ್-19 ಲಸಿಕೆ ಪ್ರಮಾಣ ಶುಕ್ರವಾರ 67.65 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.ಶುಕ್ರವಾರ ಒಂದೇ ದಿನ 51,88,894 ಡೋಸ್ ಲಸಿಕೆ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಒಟ್ಟಾರೇ ನೀಡಲಾಗಿರುವ ಕೋವಿಡ್-19 ಲಸಿಕೆ ಪ್ರಮಾಣ ಶುಕ್ರವಾರ 67.65 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.ಶುಕ್ರವಾರ ಒಂದೇ ದಿನ 51,88,894 ಡೋಸ್ ಲಸಿಕೆ ನೀಡಲಾಗಿದೆ.

ಅಂತಿಮ ವರದಿಯಲ್ಲಿ ದೈನಂದಿನ ಲಸಿಕೆ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಾತ್ಕಾಲಿಕ ವರದಿಯಲ್ಲಿ ಸಚಿವಾಲಯ ಮಾಹಿತಿ ನೀಡಿದೆ.

ಲಸಿಕಾ ಅಭಿಯಾನ ಆರಂಭವಾದ ನಂತರ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 18 ರಿಂದ 44 ವರ್ಷದೊಳಗಿನ 26,66,03,686 ಮಂದಿ ಮೊದಲ ಡೋಸ್ ಪಡೆದಿದ್ದರೆ, 3,20,41,597 ಡೋಸ್ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. 

ಲಸಿಕೆ ಅಭಿಯಾನ ಕೋವಿಡ್-19 ಸಾಂಕ್ರಾಮಿಕದಿಂದ ದೇಶದ ಅತ್ಯಂತ ದುರ್ಬಲ ಜನರನ್ನು ರಕ್ಷಿಸುವ ಪ್ರಮುಖ ಸಾಧನವಾಗಿದ್ದು ಇದನ್ನು ನಿಯಮಿತವಾಗಿ ಪರಿಶೀಲಿಸಲಾಗುತ್ತಿದ್ದು, ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com