ದೇಶದಾದ್ಯಂತ 67.72 ಕೋಟಿ ಡೋಸ್‌ ಲಸಿಕೆ ವಿತರಣೆ: ಕೇಂದ್ರ ಸರ್ಕಾರ

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 58.85 ಲಕ್ಷ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 67.72 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 58.85 ಲಕ್ಷ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 67.72 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ 18 ರಿಂದ 44 ವರ್ಷದೊಳಗಿನ 8.89 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದರೆ, 4.62 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿಸಿದೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,618 ಹೊಸ ಕೇಸ್ ಪತ್ತೆಯಾಗಿದ್ದು 330 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 67,09,59,968 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com