ಅಂಗರಕ್ಷಕ ಸಾವು ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ 

ಬಾಡಿಗಾರ್ಡ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ ಜಾರಿ ಮಾಡಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಸುವೇಂದು ಅಧಿಕಾರಿ
ಸುವೇಂದು ಅಧಿಕಾರಿ

ಕೊಲ್ಕತ್ತಾ: ಬಾಡಿಗಾರ್ಡ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ ಜಾರಿ ಮಾಡಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಸೋಮವಾರ ಕೊಲ್ಕತ್ತಾದಲ್ಲಿನ ಭವಾನಿ ಭವನ್ ನಲ್ಲಿರುವ ಸಿಐಡಿ ಕೇಂದ್ರ ಕಚೇರಿಯಲ್ಲಿ ವಿಚಾರಣಾಧಿಕಾರಿಗಳ ಮುಂದೆ ಹಾಜರಾಗುವಂತೆ ನಂದಿಗ್ರಾಮದ ಭಾರತೀಯ ಜನತಾ ಪಾರ್ಟಿ ಶಾಸಕರಾಗಿರುವ ಸುವೇಂದುಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸುವೇಂದು ಅಧಿಕಾರಿ ಅಂಗರಕ್ಷಕ ಸುಬಾಭ್ರತಾ ಚಕ್ರವರ್ತಿ ತನ್ನ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದ. ಈ ಪ್ರಕರಣದ ತನಿಖೆಗಾಗಿ ತಂಡವೊಂದನ್ನು ಸಿಐಡಿ ರಚಿಸಿತ್ತು. ತನ್ನ ಪತಿಯ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಚಕ್ರವರ್ತಿ ಪತ್ನಿ ಕಾಂಟೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ವಿಚಾರಣೆ ಭಾಗವಾಗಿ ಈವರೆಗೆ 11 ಪೊಲೀಸರು ಸೇರಿದಂತೆ 15 ಮಂದಿಯನ್ನು ಸಿಐಡಿ ವಿಚಾರಣೆ ನಡೆಸಿದೆ. ಈ ಹಿಂದೆ ಪೂರ್ವ ಮಿಡ್ನಾಪುರದಲ್ಲಿರುವ ಅಧಿಕಾರಿಯ ನಿವಾಸ 'ಶಾಂತಿ ಕುಂಜ್' ಗೂ ಸಿಐಡಿ ತಂಡ ಭೇಟಿ ನೀಡಿತ್ತು.

ಪಶ್ಚಿಮ ಬಂಗಾಳ ರಾಜ್ಯ ಸಶಶ್ತ್ರ ಪೊಲೀಸ್ ಸಿಬ್ಬಂದಿಯಾಗಿದ್ದ ಚಕ್ರವರ್ತಿ, ಅಧಿಕಾರಿ ಟಿಎಂಸಿಯ ಸಂಸದರಾಗಿದ್ದ ಅವಧಿಯಲ್ಲಿ ಭದ್ರತಾ ತಂಡದಲ್ಲಿದ್ದರು. 2015ರಲ್ಲಿ ಅಧಿಕಾರಿ ಸಚಿವರಾದಾಗಲೂ ಭದ್ರತಾ ಸಿಬ್ಬಂದಿಯಾಗಿ ಮುಂದುವರೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com