ಕಾಶ್ಮೀರ: ಸೈಯದ್ ಅಲಿ ಗಿಲಾನಿ ಮೃತ ದೇಹಕ್ಕೆ ಪಾಕ್ ಧ್ವಜ ಹೊದಿಸಿದ ಕುಟುಂಬಸ್ಥರ ವಿರುದ್ಧ ಎಫ್ಐಆರ್

ಕಾಶ್ಮೀರ ಪ್ರತ್ಯೇಕತಾವಾದಿ ಹಿರಿಯ ನಾಯಕ ಸೈಯದ್ ಅಲಿ ಗಿಲಾನಿ ಅವರ ಮೃತದೇಹಕ್ಕೆ ಪಾಕಿಸ್ತಾನದ ಧ್ವಜ ಹೊದಿಸಿದ ಮತ್ತು ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಗಿಲಾನಿ ಕುಟುಂಬದ ವಿರುದ್ಧ ಜಮ್ಮು ಮತ್ತು ಕಾಶ್ಮೀರ...
ಸೈಯದ್ ಅಲಿ ಗಿಲಾನಿ
ಸೈಯದ್ ಅಲಿ ಗಿಲಾನಿ

ಶ್ರೀನಗರ: ಕಾಶ್ಮೀರ ಪ್ರತ್ಯೇಕತಾವಾದಿ ಹಿರಿಯ ನಾಯಕ ಸೈಯದ್ ಅಲಿ ಗಿಲಾನಿ ಅವರ ಮೃತದೇಹಕ್ಕೆ ಪಾಕಿಸ್ತಾನದ ಧ್ವಜ ಹೊದಿಸಿದ ಮತ್ತು ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಗಿಲಾನಿ ಕುಟುಂಬದ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ಎಫ್ಐ ಆರ್ ದಾಖಲಿಸಿದ್ದಾರೆ.

ಗಿಲಾನಿ ಅಂತ್ಯ ಸಂಸ್ಕಾರದ ವೇಳೆ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಗಿಲಾನಿ ಕುಟುಂಬದ ವಿರುದ್ಧ ಬದ್ಗಾಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸೈಯದ್ ಅಲಿ ಗಿಲಾನಿ ಮೃತದೇಹಕ್ಕೆ ಪಾಕಿಸ್ತಾನದ ಧ್ವಜವನ್ನು ಹೊದಿಸಿದವರ ಮೇಲೆಯೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಈ ಮಧ್ಯೆ, ನಮ್ಮ ತಂದೆಯ ಮೃತದೇಹವನ್ನು ಬಲವಂತವಾಗಿ ಪೊಲೀಸರು ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಅಲ್ಲದೆ ಮನೆಯ ಮಹಿಳೆಯರನ್ನು ಮತ್ತು ಕುಟುಂಬಸ್ಥರನ್ನು ಥಳಿಸಿದ್ದಾರೆ ಎಂದು ಗಿಲಾನಿ ಪುತ್ರ ನಸೀಮ್ ಗಿಲಾನಿ ಆರೋಪಿಸಿದ್ದಾರೆ. ಆದರೆ ನಸೀಮ್ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದಾರೆ.

ಪೊಲೀಸರ ವಿರುದ್ಧದ ಆರೋಪಗಳು ಆಧಾರ ರಹಿತವಾಗಿವೆ, ಗಿಲಾನಿ ಅಂತಿಮ ವಿಧಿ-ವಿಧಾನಗಳನ್ನು ಪೂರೈಸಲು ಪೊಲೀಸರು ಕುಟುಂಬಕ್ಕೆ ಎಲ್ಲ ರೀತಿಯಿಂದಲೂ ಸಹಾಯ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com