ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗಾಗಿ ಪ್ರಧಾನಿ ಮೋದಿ ವಿಶೇಷ ಔತಣಕೂಟ: ಅನುರಾಗ್ ಠಾಕೂರ್
ಒಲಂಪಿಕ್ಸ್ ಕ್ರೀಡಾಪುಟಗಳಿಗೆ ನಡೆಸಿದಂತೆಯೇ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಔತಣಕೂಟ ಆಯೋಜಿಸಲಿದ್ದಾರೆಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಭಾನುವಾರ ಹೇಳಿದ್ದಾರೆ.
Published: 05th September 2021 01:17 PM | Last Updated: 05th September 2021 01:17 PM | A+A A-

ಅನುರಾಗ್ ಠಾಕೂರ್
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಪುಟಗಳಿಗೆ ನಡೆಸಿದಂತೆಯೇ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಔತಣಕೂಟ ಆಯೋಜಿಸಲಿದ್ದಾರೆಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಭಾನುವಾರ ಹೇಳಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೊಕಿಯೊ ಪ್ಯಾರಾಂಪಿಕ್ಸ್ ನಲ್ಲಿ ಚಿನ್ನ ಹಾಗೂ ಬೆಳ್ಳಿ ಗೆದ್ದ ಕೃಷ್ಣ ನಗರ್ ಹಾಗೂ ಸುಹಾಸ್ ಯತಿರಾಜ್ ಅವರಿಗೆ ಶುಭ ಕೋರಿದರು.
ಕರ್ನಾಟಕ ರಾಜ್ಯಕ್ಕೆ ಬಂದಿಳಿದಾಗ ಇದಕ್ಕಿಂತಲೂ ಶುಭಸುದ್ದಿ ಮತ್ತೇನಿದೆ. ದೇಶಕ್ಕಾಗಿ ಪದಕ ಗೆದ್ದ ಮತ್ತೊಬ್ಬ ಕ್ರೀಡಾಪಟು ಕರ್ನಾಟಕ ರಾಜ್ಯದವರಾಗಿದ್ದಾರೆ. ಪದಕ ಗೆದ್ದ ಎಲ್ಲಾ ಕ್ರೀಡಾಪಟುಗಳಿಗೆ ಹೃದಯ ಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ. 2016ರಲ್ಲೂ 19 ಮಂದಿ ಕ್ರೀಡಾಪಟುಗಳು ಪದಕ ಗೆದ್ದಿದ್ದರು. 2021ರಲ್ಲೂ ಭಾರತಕ್ಕೆ 19 ಪದಕಗಳು ಬರುತ್ತಿವೆ. ಭಾರತ ಉತ್ತಮ ಸಾಧನೆ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗುತ್ತಿದೆ. ನಮ್ಮ ಪದಕ ಬೇಟೆ 5 ಪಟ್ಟು ಹೆಚ್ಚಾಗಿದೆ. ಇದೊಂದು ದೊಡ್ಡ ಸಾಧನೆಯಾಗಿದೆ. ಎಲ್ಲಾ ಕ್ರೀಡಾಪಟುಗಳಿಗೂ ಶುಭಾಶಯ ಕೋರುತ್ತಿದ್ದೇನೆಂದು ತಿಳಿಸಿದ್ದಾರೆ.