44 ಶಿಕ್ಷಕರಿಗೆ 2021ನೇ ಸಾಲಿನ 'ರಾಷ್ಟ್ರಪ್ರಶಸ್ತಿ' ನೀಡಿ ಗೌರವಿಸಿದ ರಾಷ್ಟ್ರಪತಿ ಕೋವಿಂದ್

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 44 ಶಿಕ್ಷಕರಿಗೆ 2021ನೇ ಸಾಲಿನ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಿದ್ದಾರೆ. 
ಶಿಕ್ಷಕರಿಗೆ ಪ್ರಶಸ್ತಿ ನೀಡುತ್ತಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಶಿಕ್ಷಕರಿಗೆ ಪ್ರಶಸ್ತಿ ನೀಡುತ್ತಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 44 ಶಿಕ್ಷಕರಿಗೆ 2021ನೇ ಸಾಲಿನ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಿದ್ದಾರೆ. 

ದೆಹಲಿಯಲ್ಲಿ ವರ್ಚ್ಯುವಲ್ ಸಮಾವೇಶದ ಮೂಲಕ ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ತೆಲಂಗಾಣ, ಸಿಕ್ಕಿಂ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ಬಿಹಾರ ಮತ್ತು ತಮಿಳುನಾಡು ಸೇರಿದಂತೆ 10 ವಿವಿಧ ರಾಜ್ಯಗಳ ತಲಾ ಇಬ್ಬರು ಶಿಕ್ಷಕರಿಗೆ ರಾಷ್ರಪತಿಗಳು ರಾಷ್ಟ್ರಪ್ರಶಸ್ತಿ ಪ್ರದಾನ ಮಾಡಿದ್ದಾರೆ. 

ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಮನಾಥ್ ಕೋವಿಂದ್ ಅವರು, ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ತತ್ವಜ್ಞಾನಿ ಹಾಗೂ ವಿದ್ವಾಂಸರೆಂದೇ ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದ್ದಾರೆ. ಶಿಕ್ಷಕರಾಗಿಯೇ ಎಲ್ಲರ ನೆನಪಿನಲ್ಲಿ ಉಳಿಯಬೇಕೆಂದು ಬಯಸಿದ್ದರು. ಅದರಂತೆ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದಂತೆ ಶ್ರೇಷ್ಠ ಶಿಕ್ಷಕರಾಗಿ ಉಳಿದುಕೊಂಡಿದ್ದಾರೆಂದು ಹೇಳಿದ್ದಾರೆ. 

ಮಾಜಿ ರಾಷ್ಟ್ರಪತಿ ಡಾ ಎಸ್ ರಾಧಾಕೃಷ್ಣನ್ ಅವರ ಜಯಂತಿ ಅಂಗವಾಗಿ ದೇಶಾದ್ಯಂತ ಇಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. 

ರಾಧಾಕೃಷ್ಣನ್ ಅವರು ತತ್ವಜ್ಞಾನಿ ಮತ್ತು ಖ್ಯಾತ ಲೇಖಕರು ಕೂಡ ಆಗಿದ್ದರು, ಭಾರತದ ಎರಡನೇ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದರು. ಅವರು ಹುಟ್ಟಿದ್ದು ಸೆಪ್ಟೆಂಬರ್ 5, 1888. ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅದ್ವಿತೀಯ. 1962ರಲ್ಲಿ ಅವರ ಗೌರವಾರ್ಥ ಶಿಕ್ಷಕರ ದಿನವನ್ನು ಆಚರಿಸಲು ಆರಂಭವಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com